Untitled Document
Sign Up | Login    
Dynamic website and Portals
  
October 28, 2014

ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ವಿಚಾರ: ಸುಪ್ರೀಂ ಗರಂ

ನವದೆಹಲಿ : ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಉಪರಾಜ್ಯಪಾಲರ ವಿರುದ್ಧ ಗರಂ ಆದ ಸುಪ್ರೀಂ ಕೋರ್ಟ್, ಪ್ರಜಾಪ್ರಭುತ್ವದಲ್ಲಿ ಶಾಶ್ವತವಾಗಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ದೆಹಲಿ ವಿಧಾನಸಭೆ ವಿಸರ್ಜನೆಮಾಡುವಂತೆ ಕೋರಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ಹೇಳಿಕೆ ನೀಡಿದೆ.

ದೆಹಲಿಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ರಾಷ್ಟ್ರಪತಿಗಳಿಗೆ ಕೋರಿದ್ದಾರೆ ಎಂದು ಅಡಿಷನಲ್ ಸಾಲಿಸಿಟರ್ ಜನರಲ್ ನರಸಿಂಹ ಸುಪ್ರೀಂ ಕೋರ್ಟ್ ಗೆ ತಿಳಿಸಿದರು.

ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತವಿಲ್ಲ. ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ ಸರ್ಕಾರ ರಚನೆಗೆ ಬಿಜೆಪಿಗೆ ಬೆಂಬಲ ನೀಡುವುದಿಲ್ಲ. ಹೀಗಾಗಿ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಬಾರದು. ಹೊಸದಾಗಿ ಚುನಾವಣೆ ನಡೆಸಲು ಸೂಚಿಸಬೇಕು ಎಂದು ಪ್ರಶಾಂತ್ ಭೂಷಣ್ ಆಪ್ ಪರ ವಾದ ಮಂಡಿಸಿರು.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ವಕೀಲ ಕೆ.ಕೆ.ಗೋಪಾಲ್ ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಗೆ ರಾಷ್ಟ್ರಪತಿ ಸಮ್ಮತಿ ಸೂಚಿಸಿದ್ದಾರೆ. ಸರ್ಕಾರ ರಚನೆ ಸಂಬಂಧ ಉಪರಾಜ್ಯಪಾಲರು ನಿರ್ಧಾರ ಕೈಗೊಳ್ಳಬೇಕು. ಆಪ್ ಅರ್ಜಿ ವಿಚಾರಣೆಗೆ ಯೋಗ್ಯವಲ್ಲ ಎಂದು ತಿಳಿಸಿದರು.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ, ದೊಡ್ಡ ಪಕ್ಷವಾದ ಬಿಜೆಪಿಗೆ ಸರ್ಕಾರ ರಚಿಸಲು ಸರಳ ಬಹುತವಿದೆಯೇ ಎಂದು ಪ್ರಶ್ನಿಸಿರುವ ನ್ಯಾಯಾಲಯ, ಜನರು ಪ್ರಜಾಸತ್ತಾತ್ಮಕ ಸರ್ಕಾರ ಹೊಂದುವ ಹಕ್ಕು ಹೊಂದಿದ್ದಾರೆ ಎಂದು ತಿಳಿಸಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಶ್ವತವಾಗಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಾಧ್ಯವಿಲ್ಲ. ಐದು ತಿಂಗಳವರೆಗೆ ಕಾಲಾವಕಾಶ ಕೇಳಿದಂತೆ ಸರ್ಕಾರ ರಚನೆ ಬಗ್ಗೆ ಉಪರಾಜ್ಯಪಾಲರು ಮೊದಲೇ ನಿರ್ಧಾರ ಕೈಗೊಳ್ಳಬೇಕಾಗಿತ್ತು. ಸಾಕಷ್ಟು ಸಮಯಾವಕಾಶಗಳನ್ನು ತೆಗೆದುಕೊಂಡಿದ್ದರೂ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ ದೆಹಲಿಯ ಇಂದಿನ ಸ್ಥಿತಿಗೆ ಕೇಂದ್ರ ಸರ್ಕಾರ ಹಾಗೂ ಉಪರಾಜ್ಯಪಾಲರೇ ಹೊಣೆ ಎಂದು ತರಾಟೆಗೆ ತೆಗೆದುಕೊಂಡಿತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited