ನವದೆಹಲಿ : 'ಕಪ್ಪುಹಣ' ಹೊಂದಿರುವವರ ಪಟ್ಟಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೆಸರಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಕಪ್ಪುಹಣದ ಬಗ್ಗೆ ತನಿಖೆ ನಡೆಸುತ್ತಿರುವ ತಂಡಕ್ಕೆ ಪತ್ರ ಬರೆದಿರುವ ಸುಬ್ರಹ್ಮಣಿಯನ್ ಸ್ವಾಮಿ, ಇಬ್ಬರು ಕಾಂಗ್ರೆಸ್ ನಾಯಕರು ಕಪ್ಪುಹಣ ಹೊಂದಿದ್ದಾರೆಂದು ತಿಳಿದಿದ್ದರೂ ಅವರ ವಿರುದ್ಧ ಈ ವರೆಗೂ ಕ್ರಮ ಕೈಗೊಳ್ಳದೇ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಬಳಿ ಇರುವ ಕಪ್ಪುಹಣವನ್ನು ಕೂಡಲೇ ವಾಪಸ್ ತರಬೇಕೆಂದು ಅರುಣ್ ಜೇಟ್ಲಿ ಅವರಿಗೆ ಮನವಿ ಮಾಡಿದ್ದೇನೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ತಿಳಿಸಿದ್ದಾರೆ. ಅ.27ರಂದು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದ ಕೇಂದ್ರ ಸರ್ಕಾರ, ಕಪ್ಪುಹಣ ಹೊಂದಿರುವ ಮೂವರು ಭಾರತೀಯ ಉದ್ಯಮಿಗಳ ಹೆಸರನ್ನು ಬಹಿರಂಗಗೊಳಿಸಿತ್ತು.