Untitled Document
Sign Up | Login    
Dynamic website and Portals
  
October 28, 2014

ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

ಮುಂಬೈ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಮುಂಬೈನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜೆ.ಪಿ.ನಡ್ಡಾ ಹಾಗೂ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಫಡ್ನವಿಸ್ ಅವರ ಹೆಸರನ್ನು ಏಕನಾಥ್ ಖಡ್ಸೆ ಸೂಚಿಸಿದರು.

ಈ ಮೂಲಕ ಫಡ್ನವಿಸ್ ಮಹಾರಾಷ್ಟ್ರದ ನೂತನ ಸಿಎಂ ಆಗಿ ಆಯ್ಕೆ ಯಾಗಿದ್ದಾರೆ. ನಾಗ್ಪುರದ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಫಡ್ನವಿಸ್, ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು.

ಸಂಜೆ 6 ಗಂಟೆಗೆ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗಲಿದ್ದು, ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಂದ್ರ ಫಡ್ನವಿಸ್, ಶಾಸಕಾಂಗ ಪಕ್ಷದ ನಾಯಕನನ್ನಾಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ಬಿಜೆಪಿ ನಾಯಕರಿಗೆ ಹಾಗೂ ಶಾಸಕರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಮಹಾರಾಷ್ಟ್ರದಲ್ಲಿ ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಆಡಳಿತ ನೀಡುತ್ತೇನೆ. ಛತ್ರಪತಿ ಶಿವಾಜಿ, ಅಬೇಡ್ಕರ್ ಆಶಯದಂತೆ ಆಡಳಿತ ನಡೆಸುವುದಾಗಿ ತಿಳಿಸಿದರು.

ಅ.15ರಂದು ನಡೆದ ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ 123 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಶಿವಸೇನೆ 62, ಕಾಂಗ್ರೆಸ್ 42, ಎನ್ ಸಿಪಿ 40, ಎಂ ಎನ್ ಎಸ್ 2 ಹಾಗೂ ಇತರೆ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು.ಆದರೆ ಸರ್ಕಾರ ರಚನೆಗೆ ಬಿಜೆಪಿಗೆ 23 ಸ್ಥಾನಗಳ ಕೊರತೆ ಎದುರಾಗಿತ್ತು. ಈ ನಿಟ್ಟಿನಲ್ಲಿ ಶಿವಸೇನೆಯೊಂದಿಗೆ ಮೈತ್ರಿ ಮೂಲಕ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿತ್ತು. ಈ ಹಿನ್ನಲೆಯಲ್ಲಿ ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited