Untitled Document
Sign Up | Login    
Dynamic website and Portals
  
October 29, 2014

ಐ.ಎಸ್.ಐ.ಎಸ್ ಉಗ್ರ ಸಂಘಟನೆ ಸೇರಲು ಯತ್ನಿಸಿದ್ದ ಗೂಗಲ್ ನ ಮಾಜಿ ಉದ್ಯೋಗಿ?

ಹೈದರಾಬಾದ್ : ಪ್ರತಿಷ್ಠಿತ ಗೂಗಲ್ ಕಂಪನಿಯ ಮಾಜಿ ಉದ್ಯೋಗಿಯೋರ್ವ ಇಸ್ಲಾಮಿಕ್ ಸ್ಟೇಟ್ಉಗ್ರ ಸಂಘಟನೆ ಸೇರಲು ಯತ್ನಿಸುತ್ತಿದ್ದ ಎಂದು ಹೈದರಾಬಾದ್ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್ಗೂಗಲ್ ಯುನಿಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವ ಇತ್ತೀಚೆಗಷ್ಟೇ ಕೆಲಸಕ್ಕೆ ರಾಜೀನಾಮೆ ನೀಡಿ ಸೌದಿ ಅರೇಬಿಯಾಗೆ ಭೇಟಿ ನೀಡಿದ್ದ ಈ ಹಿನ್ನೆಲೆಯಲ್ಲಿ ಆತನ ಮೇಲೆ ಹೈದರಾಬಾದ್ ನಗರ ಪೊಲೀಸರು ಕಣ್ಣಿಟ್ಟಿದ್ದಾರೆ. ಅಲ್ಲದೇ ಸೌದಿ ಅರೆಬಿಯಾಗೆ ಭೇಟಿ ನೀಡಿದ ಬಳಿಕ ಆತನ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅನುಮಾನಾಸ್ಪದ ಸಂಭಾಷಣೆಗಳು ನಡೆದಿದ್ದ ಕಾರಣ ವಿಚಾರಣೆಗೊಳಪಡಿಸಿದ್ದಾರೆ.

ಸೌದಿ ಅರೇಬಿಯಾಗೆ ಭೇಟಿ ನೀಡಿದ ಬಳಿಕ ಆನ್ ಲೈನ್ ಮೂಲಕ ಉಗ್ರ ಸಂಘಟನೆಯಿಂದ ಪ್ರೇರಿತಗೊಂಡಿರುವ ವ್ಯಕ್ತಿ ಇಸ್ಲಾಮಿಕ್ ಸ್ಟೇಟ್ಉಗ್ರ ಸಂಘಟನೆ ಸೇರಲು ಯತ್ನಿಸುತ್ತಿದ್ದಾನೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದಕ್ಕೂ ಮುನ್ನ ಹೈದರಾಬಾದ್ ನ ಇಂಜಿನಿಯರಿಂಗ್ ವಿದ್ಯಾರ್ಥಿಗಳೂ ಐ.ಎಸ್.ಐ.ಎಸ್ ಉಗ್ರ ಸಂಘಟನೆ ಸೇರಲು ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಉಗ್ರ ಸಂಘಟನೆಗಳ ಬಗ್ಗೆ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಐ.ಎಸ್.ಐ.ಎಸ್ ಉಗ್ರ ಸಂಘಟನೆ, ಸಾಮಾಜಿಕ ಜಾಲತಾಣಗಳ ಮೂಲಕ ವಿದ್ಯಾವಂತ ಯುವಕರನ್ನು ತನ್ನತ್ತ ಸೆಳೆದುಕೊಳ್ಳಲು ಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಅಧಿಕಾರಿಗಳು ಫೇಸ್ ಬುಕ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ತೀವ್ರ ತಪಾಸಣೆಗೆ ಒಳಪಡಿಸುತ್ತಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited