ಮುಜಾಫರ್ ನಗರ : ಕಾನೂನು ಬಾಹಿರವಾಗಿ ವಾಸಿಸುತ್ತಿದ್ದ 5 ಬಾಂಗ್ಲಾ ದೇಶದ ಪ್ರಜೆಗಳನ್ನು ಉತ್ತರ ಪ್ರದೇಶ ಪೊಲೀಸರು ಅ.29ರಂದು ಬಂಧಿಸಿದ್ದಾರೆ.
ಕಳೆದ ಹತ್ತು ವರ್ಷದಿಂದ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ಕಾನೂನು ಬಾಹಿರವಾಗಿ ವಾಸಿಸುತ್ತಿದ್ದ ಬಾಂಗ್ಲಾ ಪ್ರಜೆಗಳ ವಿರುದ್ಧ ವಿದೇಶಿ ಕಾಯ್ದೆಯ ಅಡಿ ಪ್ರಕರಣ ದಾಖಲಿಸಲಾಗಿದೆ. ಮಾವಿಯ(40), ಜಾಸ್ಮೈನ್(21), ಶಕೀಲ (23) ಅಕ್ರಮ ಬಾಂಗ್ಲಾ ವಲಸಿಗರಾಗಿದ್ದಾರೆ ಮತ್ತು ಇಬ್ಬರು ಅಪ್ರಾಪ್ತರು ಎಂದು ತಿಳಿದು ಬಂದಿದೆ.
ಬಂಧಿತ ಕುಟುಂಬದ ಮುಖ್ಯಸ್ಥ ಮಂಜೂರ್ ಅಲೇಮ್ ಪಶ್ಚಿಮ ಬಂಗಾಳದಲ್ಲಿ ಕಳ್ಳಸಾಗಾಣೆ ಮೊಕದ್ದಮೆಯಲ್ಲಿ ಜೈಲಿನಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ನಿಯಮದಂತೆ ಅವರ ದೇಶಕ್ಕೆ ಗಡಿಪಾರು ಮಾಡಲಾಗುವುದು ಎಂದು ಹಿರಿಯ ಪೋಲೀಸ್ ಅಧಿಕಾರಿ ಎಚ್ ಎನ್ ಸಿಂಗ್ ತಿಳಿಸಿದ್ದಾರೆ.