Belthangadi : ಬೆಳ್ತಂಗಡಿಯ ಕುತ್ತೆಟ್ಟಿ ಎಂಬಲ್ಲಿ ನಡೆಸಲಾಗುತ್ತಿದ್ದ ಕಸಾಯಿಖಾನೆ ಮೇಲೆ ದಾಳಿ ನಡೆಸಿರುವ ಸ್ಥಳೀಯ ಪೊಲೀಸರು, 300ಕೆ.ಜಿಯಷ್ಟು ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.
ಹೆದ್ದಾರಿಯಿಂದ 20 ಮೀಟರ್ ದೂರದಲ್ಲಿ ಈ ಕಸಾಯಿಖಾನೆ ನಡೆಯುತ್ತಿದ್ದು ಪ್ರತಿನಿತ್ಯ ಗೋವುಗಳ ಮಾರಣ ಹೋಮ ನಡೆಯುತ್ತಿತ್ತು. ಆದರೂ ಈ ವರೆಗೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿರಲಿಲ್ಲ. ಅಕ್ರಮ ಕಸಾಯಿಖಾನೆ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಉಪ್ಪಿನ ಅಂಗಡಿ ಎಸ್.ಐ ಜಗದೀಶ್ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿ ನಡೆಸುತ್ತಿದ್ದಂತೆಯೇ ಗೋಮಾಂಸ ಮಾರಾಟ ದಂಧೆ ನಡೆಸುತ್ತಿದ್ದ ಅಬ್ಬಾಸ್ ಹಾಗೂ ಶರೀಫ್ ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ಪ್ರಕರಣ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಪರಾರಿಯಾಗಿರುವ ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಕಸಾಯಿಖಾನೆ ತೆರೆದು ಗೋಮಾಂಸ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ ಎಂಬುದು ಈ ಪ್ರಕರಣದ ಮೂಲಕ ಮತ್ತೊಮ್ಮೆ ಸಾಬೀತಾಗಿದೆ.