Untitled Document
Sign Up | Login    
Dynamic website and Portals
  
November 1, 2014

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು- ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯಾದ್ಯಂತ ನ.1ರಂದು ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯೋತ್ಸವ ಇಂದಿಗೆ ಸೀಮಿತವಾಗಬಾರದು ಅದು ನಿತ್ಯೋತ್ಸವವಾಗಬೇಕು ಎಂದು ಕರೆ ನೀಡಿದ್ದಾರೆ.

ಕಂಠೀರವ ಸ್ಟೇಡಿಯಂ ನಲ್ಲಿ ಮಾತನಾಡಿದ ಸಿ.ಎಂ ರಾಜ್ಯದಲ್ಲಿ ಕನ್ನಡಿಗರೇ ಅಲ್ಪಸಂಖ್ಯಾತರೆಂಬ ಕೂಗು ಕೇಳಿಬರುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಮೊದಲು ನಾವು ಕನ್ನಡಿಗರಾಗಬೇಕು ನಂತರ ಇತರರನ್ನು ಕನ್ನಡಿಗರನ್ನಾಗಿ ಮಾಡುವ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 12 ನಗರಗಳ ಹೆಸರನ್ನು ಇಂದಿನಿಂದಲೇ ಬದಲಾವಣೆ ಮಾಡಲು ಆದೇಶ ಹೊರಡಿಸಲಾಗಿದೆ ಎಂದು ಸಿ.ಎಂ ಇದೇ ವೇಳೆ ತಿಳಿಸಿದ್ದಾರೆ. ಇನ್ನು ಖಾಸಗಿ ಶಾಲೆಗಳ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿರುವ ಸಿ.ಎಂ ಶಾಲೆಗಳಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ರಾಜ್ಯ ತಲೆ ತಗ್ಗಿಸುವಂತೆ ಮಾಡಿದೆ ಎಂದು ಕಿಡಿ ಕಾರಿದ್ದಾರೆ. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸದ ಶಾಲೆಗಳ ಮಾನ್ಯತೆ ರದ್ದು ಮಾಡಲಾಗುವುದು ಎಂದು ಸಿ.ಎಂ ಎಚ್ಚರಿಕೆ ನೀಡಿದ್ದಾರೆ

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Event

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ:  ಸ್ವಚ್ಚತಾ ಅಭಿಯಾನ
  • ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
  • 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
  • ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ
  • 70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited