Untitled Document
Sign Up | Login    
Dynamic website and Portals
  
November 1, 2014

ರಾಹುಲ್ ಗಾಂಧಿ ಕಾಂಗ್ರೆಸ್ ನ ಚುಕ್ಕಾಣಿ ಹಿಡಿಯಬೇಕು:ದಿಗ್ವಿಜಯ್ ಸಿಂಗ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್

ನವದೆಹಲಿ : 'ರಾಹುಲ್ ಗಾಂಧಿ' ನಾಯಕತ್ವದ ಚುನಾವಣೆಗಳಲ್ಲಿ ಸರಣಿ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ಸಿಗರು ರಾಹುಲ್ ಹಟಾವೋ, ಪ್ರಿಯಾಂಕ ಲಾವೋ ಎಂಬ ಘೋಷಣೆಯಲ್ಲಿ ಮುಳುಗಿದ್ದರೆ ಇತ್ತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಮಾತ್ರ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಮತ್ತಷ್ಟು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಕ್ಷದ ಉಪಾಧ್ಯಕ್ಷರಾಗಿರುವ ರಾಹುಲ್ ಗಾಂಧಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ಇದು ಸಕಾಲ ಎಂದು ದಿಗ್ವಿಜಯ್ ಸಿಂಗ್ ರಾಷ್ಟ್ರೀಯ ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯಪಟ್ಟಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ಭಾರತದಾದ್ಯಂತ ಯಾತ್ರೆ ಕೈಗೊಳ್ಳಬೇಕು ಎಂದು ದಿಗ್ವಿಜಯ್ ಸಿಂಗ್ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಎಂದಿಗೂ ಯುವ ನಾಯಕರನ್ನೇ ಕಂಡಿರುವ ಪಕ್ಷವಾಗಿದೆ. ಈ ಹಿನ್ನೆಲೆಯಲ್ಲಿ ಹಾಲಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಹುಲ್ ಗಾಂಧಿ ಅವರನ್ನು ನೇಮಿಸಬೇಕು, ಸೋನಿಯಾ ಗಾಂಧಿ ಕೇವಲ ಪಕ್ಷದ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಬೇಕು ಎಂದು ದಿಗ್ವಿಜಯ್ ಸಿಂಗ್ ಒತ್ತಾಯಿಸಿದ್ದಾರೆ.

2014ರ ಲೋಕಸಭಾ ಚುನಾವಣೆ ಸೋಲು, ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆ ಚುನಾವಣೆ ಸೋಲಿನ ಆತ್ಮಾವಲೋಕನ ಸಭೆಗಳಲ್ಲೂ ರಾಹುಲ್ ಗಾಂಧಿಗೆ ಕಾಂಗ್ರೆಸ್ ನ ಅನೇಕ ಹಿರಿಯ ನಾಯಕರು ಪಕ್ಷವನ್ನು ಮುನ್ನಡೆಸಬೇಕೆಂದು ಮನವಿ ಮಾಡಿದ್ದರು. ಆದರೆ ಸರಣಿ ಸೋಲಿನಿಂದ ಕಂಗೆಟ್ಟಿರುವ ಕಾರ್ಯಕರ್ತರು ಮಾತ್ರ ರಾಹುಲ್ ಹಟಾವೋ, ಪ್ರಿಯಾಂಕ ಲಾವೋ ಎಂಬ ಘೋಷಣೆ ಕೂಗುತ್ತಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited