ಚಿತ್ರದುರ್ಗ : ದೇಶದ ಜನ ನರೇಂದ್ರ ಮೋದಿ ಅವರ ಭ್ರಮೆಯಲ್ಲಿ ಬಿಜೆಪಿಗೆ ಮತ ಹಾಕುತ್ತಿದ್ದಾರೆ. ಆದರೆ ಮೋದಿ ನಿಜಸ್ವರೂಪ ಬಯಲಾಗಲಿದ್ದು ಮುಂದಿನ ಚುನಾವಣೆಯಲ್ಲಿ ರಾಹುಲ್ ಗಾಂಧಿಯೇ ಈ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಆಂಜನೇಯ ಭವಿಷ್ಯ ನುಡಿದಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಡಿಸಿಎಂ ಸ್ಥಾನ ಸೇರಿದಂತೆ ಯಾರಿಗೂ ಯಾರಲ್ಲೂ ಶಿಫಾರಸ್ಸು ಮಾಡುವುದಿಲ್ಲ. ಅದು ನನ್ನ ಕೆಲವೂ ಅಲ್ಲಾ. ಸೋನಿಯಾಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ಇದೇ ಸಂದರ್ಭಲ್ಲಿ ನನ್ನನ್ನು ಸಚಿವರನ್ನಾಗಿ ಮಾಡಿ ಎಂದು ನಾನು ಯಾರಿಗೂ ಶಿಫಾರಸ್ಸು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ವಿಧಾನಸಭಾ ಚುನಾವಣೆಗಳಲ್ಲಿ ಸರಣಿ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ ಕಾರ್ಯಕರ್ತರು ಪ್ರಿಯಾಂಕ ಗಾಂಧಿ, ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿಕೊಳ್ಳಬೇಕೆಂದು ಎಂಬ ಕೂಗು ವ್ಯಕ್ತವಾಗುತ್ತಿದ್ದರೆ. ಇತ್ತ ಭ್ರಮೆಯಿಂದ ಹೊರಬರದ ಕಾಂಗ್ರೆಸ್ ನ ರಾಜ್ಯ, ರಾಷ್ಟ್ರ ನಾಯಕರು ರಾಹುಲ್ ಗಾಂಧಿ ಪಕ್ಷದ ನಾಯಕತ್ವ ವಹಿಸಿಕೊಳ್ಳಬೇಕು, ಪ್ರಧಾನಿಯಾಗುತ್ತಾರೆ ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ.