Untitled Document
Sign Up | Login    
Dynamic website and Portals
  
November 2, 2014

2014ನೇ ಸಾಲಿನಲ್ಲಿ 81 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

ಜಮ್ಮು-ಕಾಶ್ಮೀರ : ಪ್ರಸಕ್ತ ಸಾಲಿನಲ್ಲಿ ಈ ವರೆಗೂ ಕಾಶ್ಮೀರ ಕಣಿವೆಯಲ್ಲಿ ಅಡಗಿದ್ದ 81 ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಳೆದ 2 ವರ್ಷದಿಂದ ಹತ್ಯೆ ಮಾಡಲಾಗಿದ್ದ ಉಗ್ರರ ಸಂಖ್ಯೆಗಿಂತ ಈ ಬಾರಿ ಭಾರತೀಯ ಸೇನೆ ಗುಂಡಿಗೆ ಬಲಿಯಾದವರ ಸಂಖ್ಯೆ ಹೆಚ್ಚಾಗಿದೆ.

ಗಡಿ ಪ್ರದೇಶದಲ್ಲಿ ಕೈಗೊಂಡ ಕಾರ್ಯಾಚರಣೆಯಲ್ಲಿ 81ಕ್ಕೂ ಹೆಚ್ಚು ಉಗ್ರರ ಹತ್ಯೆ ಮಾಡಲಾಗಿದೆ ಎಂದು ಸೇನಾ ಪಡೆಯ ವಕ್ತಾರರು ತಿಳಿಸಿದ್ದಾರೆ. ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಉಗ್ರರ ಬಳಿ 7 ಸುಧಾರಿತ ಸ್ಪೋಟಕ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದ್ದು ನಿಷ್ಕ್ರಿಯಗೊಳಿಸಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೀಗಷ್ಟೇ ನಡೆದ ಹಿರಿಯ ಸೇನಾಧಿಕಾರಿಗಳ ಸಭೆಯಲ್ಲಿ ಈ ವಿಷಯ ಬಹಿರಂಗವಾಗಿದೆ. 2013ನೇ ಸಾಲಿನಲ್ಲಿ 97 ಉಗ್ರರನ್ನು 2012ನೇ ಸಾಲಿನಲ್ಲಿ 110 ಉಗ್ರರನ್ನು ಕೊಲ್ಲಲಾಗಿತ್ತ. ಆದರೆ ಈ ಸಾಲಿನಲ್ಲಿ ಈಗಾಗಲೇ 81 ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ. ಪಾಕಿಸ್ತಾನ ಉಗ್ರರನ್ನು ಮುಂದಿಟ್ಟುಕೊಂಡು ಭಾರತದ ಮೇಲೆ ದಾಳಿ ನಡೆಸುತ್ತಿದೆ. ಅಲ್ಲದೇ ಉಗ್ರರಿಗೆ ಒಳನುಸುಳಲು ಸಹಾಯ ಮಾಡುತ್ತಿದೆ ಎಂದು ಈ ಹಿಂದೆ ಹೇಳಲಾಗಿತ್ತು.

ಒಳನುಸುಳುವಿಕೆ, ಭಯೋತ್ಪಾದನೆ ನಡೆಯುತ್ತಿರುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಿರಿಯ ಸೇನಾಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಸದ್ದು ಅಡಗುತ್ತಿರುವುದು ನಿಚ್ಚಳವಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited