ನವದೆಹಲಿ : ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆಗಳಲ್ಲಿ ಮತ್ತೊಮ್ಮೆ ಮೋದಿ ಅಲೆ ಕೆಲಸ ಮಾಡಿರುವುದರ ಪರಿಣಾಮ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧಿಗಳೂ ಹೊಗಳಲು ಪ್ರಾರಂಭಿಸಿದ್ದಾರೆ. ಇತ್ತೀಚೆಗಷ್ಟೇ ಇಂದಿರಾ ಗಾಂಧಿ ಆಪ್ತ, ಶಿಕ್ಷಣ ತಜ್ನ ಲೋಕೇಶ್ ಚಂದ್ರ ಅವರು ಪ್ರಧಾನಿ ಮೋದಿ ಅವರನ್ನು ಭಗವಂತನ ಅವತಾರವೆಂದೇ ಹೇಳಿದ್ದರು. ಇದೀಗ ಮೋದಿ ಅವರ ಕೇಜ್ರಿವಾಲ್ ಸರದಿ.
ಲೋಕಸಭಾ ಚುನಾವಣೆಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಪ್ರಧಾನಿಯನ್ನು ಮಹಾನ್ ವಾಗ್ಮಿ ಎಂದು ಬಣ್ಣಿಸಿದ್ದಾರೆ. ನ.2ರಂದು ಆಕಾಶವಾಣಿಯಲ್ಲಿ ಪ್ರಸಾರವಾದ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮೋದಿ ಅವರು ಮಾತನಾಡಿದ್ದಕ್ಕೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಪ್ರಧಾನಿ ಮೋದಿ ಅವರು ಮಹಾನ್ ವಾಗ್ಮಿ ಎಂದು ಬಣ್ಣಿಸಿದ್ದಾರೆ. ಅಲ್ಲದೇ ಮೋದಿ ಅವರು ದೇಶಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.
ಕಳೆದ ಐದು ತಿಂಗಳ ಅಧಿಕಾರವಧಿಯಲ್ಲಿ ಮೋದಿಯವರು ದೇಶದಲ್ಲಿ ಸಕಾರಾತ್ಮಕ ಬೆಳವಣಿಗೆಗಳನ್ನು ತಂದಿದ್ದಾರೆ. ಜನರ ಆಶೋತ್ತರಗಳನ್ನು ಈಡೇರಿಸಿದ್ದಾರಾ ಇಲ್ಲವಾ ಎಂಬುದನ್ನು ಕಾಲವೇ ನಿರ್ಧರಿಸಲಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ನ.2ರಂದು ಆಕಾಶವಾಣಿಯಲ್ಲಿ ಪ್ರಸಾರವಾದ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮೋದಿ ಅವರು ಮಾತನಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮೋದಿ ಓರ್ವ ಮಹಾನ್ ವಾಗ್ಮಿ ಮತ್ತು ಅವರು ಸೂಕ್ತ ವಿಷಯಗಳ ಕುರಿತು ಮಾತನಾಡಿದರು ಎಂದರು.