ಬೆಂಗಳೂರು : ಅತ್ಯಾಚಾರಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸುವಂತೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಶಿಫಾರಸ್ಸು ಮಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಉಮಾಶ್ರೀ ಹೇಳಿದ್ದಾರೆ.
ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಉಮಾಶ್ರೀ, ರೇಪಿಸ್ಟ್ ಗಳಿಗೆ ಮರಣದಂಡನೆ ನೀಡುವಂತೆ ನಾವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ರೇಪ್ ಪ್ರಕರಣಗಳನ್ನು ಸರ್ಕಾರ ಸರಿಯಾಗಿ ನಿಭಾಯಿಸಿದೆ ಎಂದ ಸಚಿವೆ "ಸರ್ಕಾರ ಪೊಲೀಸರಿಗೆ ಇಂತಹ ಪ್ರಕರಣಗಳನ್ನು ನಿಷ್ಟುರತೆಯಿಂದ ಶೀಘ್ರವಾಗಿ ವಿಚಾರಣೆ ನಡೆಸುವಂತೆ ಸೂಚಿಸಿದೆ" ಎಂದಿದ್ದಾರೆ.
ಇತ್ತೀಚೆಗೆ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದು ರಾಜ್ಯದ ಜನತೆಯಿಂದ ಸರ್ಕಾರ, ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.