Untitled Document
Sign Up | Login    
Dynamic website and Portals
  
November 4, 2014

ದೆಹಲಿ ವಿಧಾನಸಭೆ ವಿಸರ್ಜನೆಗೆ ರಾಷ್ಟ್ರಪತಿಗಳ ಒಪ್ಪಿಗೆ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ನವದೆಹಲಿ : ದೆಹಲಿ ಸರ್ಕಾರ ರಚನೆ ಬಗ್ಗೆ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ವರದಿ ಸಲ್ಲಿಸಿದ್ದು ವಿಧಾನಸಭೆಯನ್ನು ವಿಸರ್ಜಿಸುವಂತೆ ಶಿಫಾರಸು ಮಾಡಿದ್ದಾರೆ.

ಸರ್ಕಾರ ರಚನೆ ಸಂಬಂಧ ನ.3ರಂದು ನಜೀಬ್ ಜಂಗ್ ಅವರು ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿದ್ದರು. ದೆಹಲಿಯಲ್ಲಿ ಅಲ್ಪಮತದ ಸರ್ಕಾರ ರಚನೆ ಮಾಡುವುದಿಲ್ಲ ಎಂದು ಬಿಜೆಪಿ ಸ್ಪಷ್ಟವಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ನ.4ರಂದು ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸಿರುವ ನಜೀಬ್ ಜಂಗ್, ವಿಧಾನಸಭೆಯನ್ನು ವಿಸರ್ಜನೆ ಮಾಡಿ ಚುನಾವಣೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.

ರಾಜ್ಯಪಾಲರ ಮನವಿಯನ್ನು ಅಂಗೀಕರಿಸಿರುವ ರಾಷ್ಟ್ರಪತಿಗಳು ದೆಹಲಿ ವಿಧಾನಸಭೆಯನ್ನು ವಿಸರ್ಜಿಸಲು ಒಪ್ಪಿಗೆ ಸೂಚಿಸಿದ್ದು ಕೇಂದ್ರ ಸಚಿವ ಸಂಪುಟಕ್ಕೆ ಶಿಫಾರಸ್ಸು ಮಾಡಿದ್ದಾರೆ. ಈ ಬಗ್ಗೆ ನ.4ರ ಸಂಜೆ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited