Untitled Document
Sign Up | Login    
Dynamic website and Portals
  
November 4, 2014

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ:10 ರ್ಯಾಲಿಗಳಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಅತ್ಯಂತ ಕುತೂಹಲ ಸೃಸ್ಟಿಸಿರುವ ಹಾಗೂ ಪ್ರತಿಷ್ಠೆಯ ಚುನಾವಣಾ ಕಣವಾಗಿರುವ ಜಮ್ಮು-ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ 10 ರ್ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ.

ನ.10ರಂದು ಪ್ರಚಾರ ಕೈಗೊಳ್ಳಲಿರುವ ಪ್ರಧಾನಿ ಮೋದಿ ರಾಜ್ಯಾದ್ಯಂತ 10 ರ್ಯಾಲಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದಕ್ಕಾಗಿ ವೇಳಾಪಟ್ಟಿ ಸಿದ್ಧತೆ ಮಾಡಲಾಗುತ್ತಿದ್ದು ಅಂತಿಮ ಹಂತದಲ್ಲಿದೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಈಗಾಗಲೇ 45 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ಮಿಷನ್ 44+ ಯಶಸ್ವಿಗೊಳಿಸಲು ಪ್ರಧಾನಿ ಮೋದಿ 10 ರ್ಯಾಲಿಗಳನ್ನು ಕೈಗೊಳ್ಳುತ್ತಿದ್ದು ಇದರಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಮತ ನೀಡಿರುವ ಜಮ್ಮು ಮತ್ತು ಲಢಕ್ ಪ್ರದೇಶದಲ್ಲಿ ಬಿಜೆಪಿ ಹೆಚ್ಚು ಪರಿಣಾಮಕಾರಿಯಾಗಿ ಪ್ರಚಾರ ನಡೆಸುತ್ತಿದೆ. ಜಮ್ಮು ಮತ್ತು ಲಢಕ್ ಪ್ರದೇಶದಲ್ಲಿ 37 ವಿಧಾನಸಭಾ ಕ್ಷೇತ್ರಗಳಿವೆ. ಲೋಕಸಭಾ ಚುನಾವಣೆಯಲ್ಲಿ 41 ವಿಧಾನಸಭಾ ಕ್ಷೇತ್ರಗಳ ಮೇಲೆ ಹಿಡಿತ ಸಾಧಿಸಿದ್ದು ಬಿಜೆಪಿಮಿಷನ್ 44+ಯಶಸ್ವಿಯಾಗಲು ಜಮ್ಮು ವಿಧಾನಸಭಾ ಕ್ಷೇತ್ರಗಳು ಹೆಚ್ಚು ನಿರ್ಣಾಯಕ ಪಾತ್ರ ವಹಿಸಲಿವೆ.

ಜಮ್ಮು-ಕಾಶ್ಮೀರದ ವಿಧಾನಸಭಾ ಅವಧಿ ಜನವರಿ 19ಕ್ಕೆ ಮುಕ್ತಾಯಗೊಳ್ಳಲಿದ್ದು 5 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited