Untitled Document
Sign Up | Login    
Dynamic website and Portals
  
November 4, 2014

ಹೆಚ್ಚುತ್ತಿರುವ ರೇಪ್ ಪ್ರಕರಣ: ವರದಿ ನೀಡಲು ಸಿದ್ದರಾಮಯ್ಯಗೆ ಹೈಕಮಾಂಡ್ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ : ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸರ್ಕಾರದ ಮರ್ಯಾದೆಯನ್ನು ಹರಾಜು ಹಾಕುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ.

ರಾಷ್ಟ್ರೀಯ ಮಟ್ಟದಲ್ಲಿ ಅಸ್ಥಿತ್ವವವನ್ನೇ ಕಳೆದುಕೊಂಡಿರುವ ಕಾಂಗ್ರೆಸ್ ಪಾಲಿಗೆ ಭದ್ರ ಕೋಟೆಯಾಗಿ ಉಳಿದಿರುವ ಕರ್ನಾಟಕದಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ ವರದಿ ನೀಡಲು ಸಿ.ಎಂ ಸಿದ್ದರಾಮಯ್ಯಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ನೀಡಿದ್ದಾರೆ.

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನ.6ರಂದು ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಹಾಗೂ ಅದಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಂಪೂರ್ಣ ವರದಿ ಕೇಳಲು ದಿಗ್ವಿಜಯ್ ಸಿಂಗ್ ಗೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ರಾಜ್ಯದಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಷ್ಟ್ರೀಯ ಮಾಧ್ಯಮಗಳು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಿವೆ. ಈ ಬೆಳವಣಿಗೆಯಿಂದ ಎಚ್ಚೆತ್ತಿರುವ ಕಾಂಗ್ರೆಸ್ ಹೈಕಮಾಂಡ್ ಸಿ.ಎಂ ರಿಂದ ವರದಿ ಕೇಳಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited