ಬೆಂಗಳೂರು : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಬ್ದುಲ್ ಅಜೀಂ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ವಿ.ಸೋಮಣ್ಣ ಹಾಗೂ ಮಾಜಿ ಸಚಿವೆ ಶೋಭಾ ಕಂರದ್ಲಾಜೆ ಮೊದಲಾದವರು ಉಪಸ್ಥಿತರಿದ್ದರು.
ಜೆಡಿಎಸ್ ತೊರೆದ ಬಗ್ಗೆ ಮಾತನಾಡಿರುವ ಅಬ್ದುಲ್ ಅಜೀಂ,13 ವರ್ಷಗಳ ಕಾಲ ಜೆಡಿಎಸ್ ನಲ್ಲಿದ್ದು, ಈಗ ಪಕ್ಷವನ್ನು ತೊರೆದಿದ್ದೇನೆ. ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ತಿಳಿಸಿದರು.
ಜೆಡಿಎಸ್ ನಲ್ಲಿ ಇತ್ತೀಚಿನ ಕೆಲ ಬೆಳವಣಿಗೆಗಳು ಹಾಗೂ ತೀರ್ಮಾನಗಳಿಂದ ನನಗೆ ನೋವಾಗಿದೆ ಹೀಗಾಗಿ ಜೆಡಿಎಸ್ ತೊರೆದಿರುವುದಾಗಿ ತಿಳಿಸಿದ್ದಾರೆ.