ಬೆಂಗಳೂರು : ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷ ಸಂಘಟನೆ ಕುರಿತು ಸಭೆ ಕರೆದಿದ್ದು, ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾತ್ರಿ 8:30ಕ್ಕೆ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದೇವೆ. ಆದರೆ ನಿಗಮ ಮಂಡಳಿ ನೇಮಕಾತಿ ಪಟ್ಟಿಯನ್ನು ಕೊಂಡೊಯ್ಯುತ್ತಿಲ್ಲ ಎಂದು ತಿಳಿಸಿದರು.
ನ.7ರಂದು ರಾಹುಲ್ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯದ ಮುಖ್ಯಮಂತ್ರಿ ಹಾಗೂ ಅಧ್ಯಕ್ಷರ ಸಭೆ ಕರೆದಿದ್ದು, ಸಭೆಯಲ್ಲಿ ನಾವು ಭಾಗವಹಿಸುತ್ತಿದ್ದೇವೆ. ಪಕ್ಷ ಸಂಘಟನೆ ಹಿನ್ನಲೆಯಲ್ಲಿ ರಾಹುಲ್ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.
ನ.16ರಂದು ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ದೆಹಲಿಗೆ ತೆರಳುತ್ತಿದ್ದೇವೆ. ಆಗ ನಿಗಮ ಮಂಡಳಿ ನೇಮಕಾತಿ ಪಟ್ಟಿ ಕೊಂಡೊಯ್ದು, ಚರ್ಚೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.