Untitled Document
Sign Up | Login    
Dynamic website and Portals
  
November 7, 2014

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಕೆ.ಎಸ್ ಈಶ್ವರಪ್ಪ

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ

ಬೆಂಗಳೂರು : 'ಅತ್ಯಾಚಾರ ಪ್ರಕರಣ'ಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳದ ಸರ್ಕಾರವನ್ನು ಟೀಕಿಸುವ ಭರದಲ್ಲಿ ನೀಡಿದ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಸಿದ್ದರಾಮಯ್ಯ ಹಾಗೂ ಕೆ.ಜೆ ಜಾರ್ಜ್ ಮಗಳ ಮೇಲೆ ಅತ್ಯಾಚಾರ ಆಗಬೇಕು ಎಂದು ಹೇಳಿಲ್ಲ. ಅವರಿಬ್ಬರ ಮಕ್ಕಳ ಮೇಲೆ ಗೌರವವಿದೆ. ಒಂದು ವೇಳೆ ಅವರಿಬ್ಬರ ಮಕ್ಕಳ ಮೇಲೆ ಅತ್ಯಾಚಾರವಾಗಿದ್ದರೆ ಮಾತ್ರ ಸರ್ಕಾರ ಎಚ್ಚೆತ್ತುಕೊಳ್ಳುತ್ತಾ ಎಂದು ಪ್ರಶ್ನಿಸಿದ್ದೆ. ಆದರೆ ಮಾಧ್ಯಮಗಳು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿದ್ದಾರೆ ಎಂದು ತಮ್ಮ ಹೇಳಿಕೆನ್ನು ಈಶ್ವರಪ್ಪ ಸಮರ್ಥಿಸಿಕೊಂಡಿದ್ದಾರೆ.

ಇದೇ ವೇಳೆ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಮ್ಮ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, ನನ್ನ ಮನೆಯಮುಂದೆ ಇಂತಹ 100 ಪ್ರತಿಭಟನೆಗಳನ್ನು ನೋಡಿದ್ದೇನೆ ಎಂದಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited