Untitled Document
Sign Up | Login    
Dynamic website and Portals
  
November 8, 2014

ಗೋವಾ ನೂತನ ಸಿಎಂ ಆಗಿ ಲಕ್ಷ್ಮಿಕಾಂತ್ ಪರ್ಸೇಕರ್ ಪ್ರಮಾಣ ವಚನ ಸ್ವೀಕಾರ

ಪಣಜಿ : ಗೋವಾದ ನೂತನ ಮುಖ್ಯಮಂತ್ರಿಯಾಗಿ ಲಕ್ಷ್ಮಿಕಾಂತ್ ಪರ್ಸೇಕರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಗೋವಾ ರಾಜ್ಯಪಾಲೆ ಮೃದಲಾ ಸಿಂಹಾ ಅವರು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಲಕ್ಷ್ಮಿಕಾಂತ್ ಪರ್ಸೇಕರ್ ಅವರಿಗೆ ಪ್ರತಿಜ್ಞಾ ವಿಧಿ ಭೋದಿಸಿದ್ದಾರೆ. ಈ ವೇಳೆ ಸಚಿವರು ಮತ್ತು ಕೆಲ ಪ್ರತಿಪಕ್ಷ ನಾಯಕರು ಹಾಜರಿದ್ದರು.

ಮೂಲತಃ ಆರ್‌ಎಸ್‌ಎಸ್ ಹಿನ್ನಲೆಯುಳ್ಳ ಪರ್ಸೇಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಶಿಫಾರಸ್ಸಿನಂತೆ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಮನೋಹರ್ ಪರಿಕ್ಕರ್ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವುದು ಖಚಿತವಾದ ಹಿನ್ನಲೆಯಲ್ಲಿ ಪರಿಕ್ಕರ್ ಗೋವಾ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾದ ಸ್ಥಾನಕ್ಕೆ ಪರ್ಸೇಕರ್ ಅವರನ್ನು ಆಯ್ಕೆ ಮಾಡಲಾಗಿತ್ತು.

ಈ ಹಿಂದೆ ಗೋವಾ ನೂತನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತಂತೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಪರ್ಸೇಕರ್ ಅವರ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ಉಪ ಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜಾ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ತಮಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಪಕ್ಷಕ್ಕೆ ರಾಜಿನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು. ಆದರೆ ಅಂತಿಮ ಕ್ಷಣದಲ್ಲಿ ನಡೆದ ಕಸರತ್ತಿನ ಫಲವಾಗಿ ಸ್ವತಃ ಅವರೇ ಮುಖ್ಯಮಂತ್ರಿ ಸ್ಥಾನಕ್ಕೆ ಲಕ್ಷ್ಮೀಕಾಂತ್ ಪರ್ಸೇಕರ್ ಅವರ ಹೆಸರನ್ನು ಸೂಚಿಸುವ ಮೂಲಕ ಅಚ್ಚರಿಗೆ ಕಾರಣರಾದರು ಎಂದು ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited