Untitled Document
Sign Up | Login    
Dynamic website and Portals
  
November 10, 2014

ಕಾಂಗ್ರೆಸ್ ಮುಖಂಡನ ಪುತ್ರ ಅಜಾತಶತ್ರು ಬಿಜೆಪಿ ಸೇರ್ಪಡೆ

ನವದೆಹಲಿ : ಹಿರಿಯ ಕಾಂಗ್ರೆಸ್‌ ಮುಖಂಡ ಕರಣ್‌ ಸಿಂಗ್‌ ಅವರ ಪುತ್ರ ಅಜಾತಶತ್ರು ಸಿಂಗ್‌ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಜಮ್ಮು- ಕಾಶ್ಮೀರವನ್ನು ಆಳಿದ ಹರಿ ಸಿಂಗ್‌ ಅವರ ಮೊಮ್ಮಗರಾಗಿರುವ ಅಜಾತಶತ್ರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಮತ್ತು ಜಿತೇಂದ್ರ ಸಿಂಗ್‌ ಅವರ ಸಮ್ಮುಖದಲ್ಲಿ ನವದೆಹಲಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಇದೇ ವೇಳೆ, ಮುಂಬರುವ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸುವ ಪಕ್ಷದ ಗುರಿಯನ್ನು ತಲುಪಲು ಶ್ರಮಿಸುವುದಾಗಿ ಹೇಳಿದ್ದಾರೆ.

ಅಜಾತಶತ್ರು ಅವರು ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಪಕ್ಷದ ನೈತಿಕ ಸ್ಥೈರ್ಯ ಹೆಚ್ಚಳಗೊಂಡಿದೆ ಎಂದು ಅಮಿತ್‌ ಶಾ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited