Untitled Document
Sign Up | Login    
Dynamic website and Portals
  
November 11, 2014

ಸಮೀಕ್ಷೆ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ

ನವದೆಹಲಿ : ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ತಿಳಿಸಿವೆ.

ದೆಹಲಿಯಲ್ಲಿ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ 46 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಅಧಿಕಾರ ಹಿಡಿಯುವ ಸಾಧ್ಯತೆಯಿದೆ ಎಂದು ಎರಡು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

2013ರ ವಿಧಾನಸಭೆ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಆಮ್ ಆದ್ಮಿ ಪಕ್ಷ ಈ ಬಾರಿ ಕೇವಲ 18 ಸ್ಥಾನ ಪಡೆದರೆ, ಕಾಂಗ್ರೆಸ್ 3 ರಿಂದ 5 ಸ್ಥಾನಕ್ಕೆ ತೃಪ್ತಿ ಪಡಲಿದೆ. ಶೇಕಡಾವಾರು ಮತಗಳಿಕೆಯಲ್ಲಿ ಬಿಜೆಪಿ ಶೇ.38, ಎಎಪಿ ಶೇ.26 ಹಾಗೂ ಕಾಂಗ್ರೆಸ್ ಶೇ.22ರಷ್ಟು ಮತ ಪಡೆಯಲಿವೆ.

ಮುಖ್ಯಮಂತ್ರಿ ಅಭ್ಯರ್ಥಿಯಲ್ಲಿ ಅರವಿಂದ್ ಕೇಜ್ರಿವಾಲ್ ಮೊದಲ ಸ್ಥಾನ ಪಡೆದಿದ್ದು, ಕೇಜ್ರಿವಾಲ್ ಸಿಎಂ ಆಗಬೇಕೆಂಬುದು ಶೇ.39ರಷ್ಟು ಜನರ ಆಶಯವಾಗಿದೆ. ಎರಡನೆ ಸ್ಥಾನದಲ್ಲಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಹರ್ಷವರ್ಧನ್ ಇದ್ದು, ಶೇ.38ರಷ್ಟು ಮತ ಪಡೆದಿದ್ದರೆ, ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಶೇ.7, ಬಿಜೆಪಿ ನಾಯಕರಾದ ಜಗದೀಶ್ ಮುಖಿ ಶೇ.5 ಹಾಗೂ ಸತೀಶ್ ಉಪಾಧ್ಯಾಯ ಶೇ.4ರಷ್ಟು ಮತ ಪಡೆದಿದ್ದಾರೆ.

50 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಸಿದ ಸಮೀಕ್ಷೆ ವೇಳೆ ಪ್ರಧಾನಿ ನರೇಂದ್ರ ಮೋದಿ ಉತ್ತಮ ಆಡಳಿತ ನಡೆಸುತ್ತಿದ್ದಾರೆಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ದೆಹಲಿಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬುದು ಹಲವರ ಅಭಿಮತ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited