Untitled Document
Sign Up | Login    
Dynamic website and Portals
  
November 13, 2014

ಮಾಛಿಲ್ ನಕಲಿ ಎನ್ ಕೌಂಟರ್ ಪ್ರಕರಣ: 7 ಯೋಧರಿಗೆ ಜೀವಾವಧಿ ಶಿಕ್ಷೆ

ಶ್ರೀನಗರ : ಜಮ್ಮು-ಕಾಶ್ಮೀರದ ಕುಪ್ವಾರ ಬಳಿಯ ಮಾಛಿಲ್ ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸೇನಾಧಿಕಾರಿಗಳು ಹಾಗೂ ನಾಲ್ವರು ಯೋಧರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

2010ರ ಏಪ್ರಿಲ್ ನಲ್ಲಿ ಜಮ್ಮು-ಕಾಶ್ಮೀರದ ಉತ್ತರ-ಕಾಶ್ಮೀರದಲ್ಲಿನ ಬಳಿಯ ಮಾಛಿಲ್ ನಲ್ಲಿ ಮೂವರು ಯುವಕರನ್ನು ಭಾರತೀಯ ಸೇನೆ ಎನ್ ಕೌಂಟರ್ ನಡೆಸಿತ್ತು.

ಪಾಕ್ ನುಸುಳುಕೋರರು ಎಂದು ಭಾವಿಸಿ ಸೇನಾಧಿಕಾರಿಗಳು ಈ ಎನ್ ಕೌಂಟರ್ ನಡೆಸಿದ್ದರು. ಈ ಪ್ರಕರಣದ ಬಗ್ಗೆ ಜಮ್ಮು-ಕಾಶ್ಮೀರ ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿತ್ತು. ತನಿಖೆ ಬಳಿಕ ಇದು ನಕಲಿ ಎನ್ ಕೌಂಟರ್ ಎಂಬುದು ಸಾಬೀತಾಗಿತ್ತು.

ಇಬ್ಬರು ಸೇನಾಧಿಕಾರಿಗಳು ಹಾಗೂ ಐವರು ಯೋಧರು ಸೇರಿ ಒಟ್ಟು 7 ಯೋಧರ ವಿರುದ್ಧ ಜಮ್ಮು-ಕಾಶ್ಮೀರ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಜನರಲ್ ಕೋರ್ಟ್ ಮಾರ್ಷಲ್, ಏಳು ಯೋಧರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಆದೇಶ ನೀಡಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited