Untitled Document
Sign Up | Login    
Dynamic website and Portals
  
November 13, 2014

ಗಡಿ ರಾಜ್ಯಗಳ ಮದರಸಾಗಳಲ್ಲಿ ವಿದೇಶಿ ಶಿಕ್ಷಕರು: ಸಮೀಕ್ಷೆ ನಡೆಸಲು ಕೇಂದ್ರದ ನಿರ್ಧಾರ

ಮದರಸಾ (ಸಂಗ್ರಹ ಚಿತ್ರ) ಮದರಸಾ (ಸಂಗ್ರಹ ಚಿತ್ರ)

ನವದೆಹಲಿ : ನೆರೆ ರಾಷ್ಟ್ರಗಳೊಂದಿಗೆ ಅಂತಾರಾಷ್ಟ್ರೀಯ ಗಡಿ ಹಂಚಿಕೊಂಡಿರುವ ರಾಜ್ಯಗಳ ಮದರಸಾಗಳಲ್ಲಿ ವಿದೇಶಿಗರು ಬೋಧನೆ ಮಾಡುತ್ತಿರುವುದರ ಬಗ್ಗೆ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಪಶ್ಚಿಮ ಬಂಗಾಳಬುರ್ದ್ವಾನ್ಮದರಸಾದಲ್ಲಿ ಸ್ಫೋಟ ಪ್ರಕರಣ ನಡೆದ ಬಳಿಕ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಬುರ್ದ್ವಾನ್ ಸ್ಫೋಟ ಪ್ರಕರಣದಲ್ಲಿ ಬಾಂಗ್ಲಾ ದೇಶದ ಜಮಾತ್-ಉಲ್-ಮುಜಾಹಿದೀನ್ ಉಗ್ರ ಸಂಘಟನೆಯ ಸದಸ್ಯರು ಮದರಸಾದಲ್ಲಿ ಶಿಕ್ಷಣ ನೀಡುತ್ತಿದ್ದಾರೆ ಎಂಬ ಅಘಾತಕಾರಿ ಮಾಹಿತಿ ಬೆಳಕಿಗೆ ಬಂದಿತ್ತು.

ಪ್ರಕರಣ ನಡೆದ ಬೆನ್ನಲ್ಲೇ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್, ಭದ್ರತಾ ವಿಷಯದಲ್ಲಿ ರಾಜ್ಯ ಸರ್ಕಾರದ ನಿಷ್ಕ್ರಿಯತೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ಎರಡೂ ರಾಜ್ಯಗಳು ಅಂತಾರಾಷ್ಟ್ರೀಯ ಗಡಿ ಹೊಂದಿವೆ. ಈ ಹಿನ್ನೆಲೆಯಲ್ಲಿ ಭಾರತದ ನೆರೆ ರಾಷ್ಟ್ರಗಳೊಡನೆ ಗಡಿ ಹಂಚಿಕೊಂಡಿರುವ ರಾಜ್ಯಗಳಲ್ಲಿನ ಮದರಸಾದಲ್ಲಿ ವಿದೇಶಿಗರು ಶಿಕ್ಷಣ ನೀಡುತ್ತಿರುವುದರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತದೆ. ಈ ಸಮೀಕ್ಷೆ ಉತ್ತರ ಪ್ರದೇಶ ಹಾಗೂ ಬಿಹಾರಕ್ಕೂ ವ್ಯಾಪಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಮದರಸಾಗಳಲ್ಲಿ ಜಿಹಾದಿ, ಉಗ್ರ ಚಟುವಟಿಕೆ ಶಿಕ್ಷಣ ನೀಡಲಾಗುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದ ಜಮೀಯತ್ ಉಲೆಮ-ಇ ಹಿಂದ್ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಹಮೂದ್ ಅಸದ್ ಮದನಿ, ಸರ್ಕಾರದಿಂದ ಅಧಿಕೃತವಾಗಿ ಗುರುತಿಸಲ್ಪಟ್ಟ ಮದರಸಾಗಳಲ್ಲಿ ಇಂತಹ ಚಟುವಟಿಕೆ ನಡೆಯುತ್ತಿಲ್ಲ. ಒಂದು ವೇಳೆ ನಡೆಯುತ್ತಿದ್ದರೆ ಅದು ಅನಧಿಕೃತ ಮದರಸಾಗಳಲ್ಲಿ ಎಂದು ಹೇಳಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited