Untitled Document
Sign Up | Login    
Dynamic website and Portals
  
November 13, 2014

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮರು ಆಯ್ಕೆ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಕುಮಾರಸ್ವಾಮಿ(ಸಂಗ್ರಹ ಚಿತ್ರ) ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಕುಮಾರಸ್ವಾಮಿ(ಸಂಗ್ರಹ ಚಿತ್ರ)

ಬೆಂಗಳೂರು : 'ಜೆಡಿಎಸ್' ನಲ್ಲಿ ಕುಮಾರಸ್ವಾಮಿ ಅವರ ನಾಯಕತ್ವದ ಬಗ್ಗೆ ಅಪಸ್ವರ ಕೇಳಿಬರುತ್ತಿದ್ದರೂ, ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಅವರನ್ನೇ ಮರು ಆಯ್ಕೆ ಮಾಡಲಾಗಿದೆ.

ನ.13ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಕುಮಾರಸ್ವಾಮಿ ಅವರನ್ನು ನೂತನ ರಾಜ್ಯಾಧ್ಯಕ್ಷರ ನೇಮಕ ಮಾಡಿರುವುದನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮೂಲಕ ಎ.ಕೃಷ್ಣಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯಕ್ಕೆ ಪ್ರಾದೇಶಿಕ ಪಕ್ಷ ಬೇಕಾ ಅಥವಾ ಬೇಡಾ ಎಂಬುದನ್ನು ರಾಜ್ಯದ ಜನ ತೀರ್ಮಾನ ಮಾಡಲಿ ಎಂದು ಇದೇ ವೇಳೆ ದೇವೇಗೌಡರು ಹೇಳಿದ್ದಾರೆ. ಅಲ್ಲದೆ ತಮ್ಮ ಪಕ್ಷದ ಬಗ್ಗೆ ತಪ್ಪು ಮಾಹಿತಿ ನೀಡುವವರ ಬಗ್ಗೆ ತಲೆಕೆಡಿಸಿಕೊಳ್ಳದಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಕುಮಾರಸ್ವಾಮಿ ಅವರು ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಅಲ್ಲದೇ ಪಕ್ಷದ ಹಿರಿಯ ನಾಕರನ್ನು ಕಡೆಗಣಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿ ಜೆಡಿಎಸ್ ನ ಮಾಜಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡಿದ್ದರು. ಪಕ್ಷದ ಹಿರಿಯ ನಾಯಕರಾದ ಬಸವಾರಜ ಹೊರಟ್ಟಿ,ಶಾಸಕ ಇಕ್ಬಾಲ್ ಅನ್ಸಾರಿ ಸಹ ಕುಮಾರಸ್ವಾಮಿ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಆದಾಗ್ಯೂ ಹೆಚ್.ಡಿ.ಕೆಗೆ ಜೆಡಿಎಸ್ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited