Untitled Document
Sign Up | Login    
Dynamic website and Portals
  
November 13, 2014

ಎರಡನೇ ಬಾರಿಗೆ ದ್ವಿಶತಕ ಗಳಿಸಿದ ರೋಹಿತ್ ಶರ್ಮಾ: ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಹೊಸ ದಾಖಲೆ

ರೋಹಿತ್ ಶರ್ಮಾ ರೋಹಿತ್ ಶರ್ಮಾ

ಕೋಲ್ಕತ್ತಾ : 'ಭಾರತ-ಶ್ರೀಲಂಕಾ' ನಡುವಿನ ನಾಲ್ಕನೇ ಏಕದಿನ ಪಂದ್ಯರೋಹಿತ್ ಶರ್ಮಾ ದ್ವಿಶತಕ ಭಾರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ಏಕದಿನ ಪಂದ್ಯದಲ್ಲಿ 2 ದ್ವಿಶತಕ ಗಳಿಸಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರೋಹಿತ್ ಶರ್ಮಾ 264 ರನ್‌ಗಳನ್ನು ಸಿಡಿಸುವ ಮೂಲಕ ಏಕದಿನ ರನ್ ಗಳಿಕೆಯಲ್ಲಿ ಅಗ್ರಸ್ಥಾನಕ್ಕೇರಿದ್ದು, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

2010ರಲ್ಲಿ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಮೊದಲ ಬಾರಿಗೆ ದ್ವಿಶತಕ ಗಳಿಸಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು. ಬಳಿಕ 2011ರಲ್ಲಿ ಇಂದೋರ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ನಡೆದ ಏಕದಿನ ಪಂದ್ಯದಲ್ಲಿ ವಿರೇಂದ್ರ ಸೆಹ್ವಾಗ್ ಅವರು 222ರನ್ ಗಳಿಸಿ ದ್ವಿಶತಕ ದಾಖಲಿಸಿದ್ದರು. 2013ರಲ್ಲಿ ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 219ರನ್ ಗಳಿಸುವ ಮೂಲಕ ಪ್ರಥಮ ಬಾರಿಗೆ ದ್ವಿಶತಕ ಗಳಿಸಿದ್ದರು.

ಇದೀಗ 264ರನ್ ಸಿಡಿಸಿರುವ ರೋಹಿತ್ ಶರ್ಮಾ, ಎರಡನೇ ಬಾರಿಗೆ ದ್ವಿಶತಕ ಗಳಿಸಿದ ಏಕೈಕ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Sports

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ.
  • ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳು ಅಗತ್ಯ : ರಾಮಲಿಂಗಾರೆಡ್ಡಿ
  • ರಿಯೋ ಒಲಂಪಿಕ್ಸ್ 2016 ಕ್ರೀಡಾ ಉತ್ಸವಕ್ಕೆ ಅದ್ದೂರಿ ತೆರೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited