ಸಿಡ್ನಿ : ನ.14ರಂದು ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನೆಹರು ಅವರಿಗೆ ಗೌರವ ಸಲ್ಲಿಸಿದ್ದಾರೆ.
ನ.14ರಿಂದ 5 ದಿನಗಳ ಕಾಲ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಟ್ವೀಟ್ ಮೂಲಕ ನೆಹರು ಅವರನ್ನು ನೆನೆದಿರುವ ಪ್ರಧಾನಿ ಮೋದಿ, ನಮ್ಮ ದೇಶದ ಮೊದಲ ಪ್ರಧಾನಿಯವರ ಜನ್ಮ ದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸುತ್ತಿದ್ದೇವೆ. ಚಾಚಾ ಅವರಿಗೆ ನನ್ನ ಶ್ರದ್ಧಾಪೂರ್ವಕ ನಮಗಳು ಎಂದು ಹೇಳಿದ್ದಾರೆ.
ಇದೇ ವೇಳೆ ಮಕ್ಕಳ ದಿನಾಚರಣೆ ಅಂಗವಾಗಿ ಕ್ವಿನ್ ಲ್ಯಾಂಡ್ ನ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಿರುವುದು ಸಂತಸದ ವಿಷಯ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ನವೆಂಬರ್ 15 ಮತ್ತು 16ರಂದು ನಡೆಯಲಿರುವ ಪ್ರಸಕ್ತ ಸಾಲಿನ ಜಿ-20 ರಾಷ್ಟ್ರಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ, ಆಸ್ಟ್ರೇಲಿಯಾದ ಬ್ರಿಸ್ಟೆನ್ ಗೆ ಭೇಟಿ ನೀಡಿದ್ದಾರೆ. ಮೋದಿ ವಿವಿ ವಿದ್ಯಾರ್ಥಿಗಳೊಂದಿಗೆ ಸೆಲ್ಫಿ ತೆಗೆಸಿಕೊಂಡಿದ್ದು ವಿಶೇಷವಾಗಿತ್ತು.