Untitled Document
Sign Up | Login    
Dynamic website and Portals
  
November 14, 2014

ಕಾಶ್ಮೀರ ರಹಿತ ಭಾರತದ ನಕ್ಷೆ ಪ್ರದರ್ಶನ: ಕ್ಷಮೆ ಯಾಚಿಸಿದ ಕ್ವೀನ್ಸ್ ಲ್ಯಾಂಡ್ ವಿವಿ

ಕಾಶ್ಮೀರ ರಹಿತ ಭಾರತದ ನಕ್ಷೆ ಕಾಶ್ಮೀರ ರಹಿತ ಭಾರತದ ನಕ್ಷೆ

ಬ್ರಿಸ್ಬೇನ್ : 'ಆಸ್ಟ್ರೇಲಿಯಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವಘಡ ನಡೆದಿದೆ. ವಿಶ್ವವಿದ್ಯಾನಿಲಯದ ಪವರ್ ಪಾಯಿಂಟ್ ಪ್ರೆಸೆಂಟೇಷನ್ ನಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ತೋರಿಸಲಾಗಿದೆ.

ಕಾಶ್ಮೀರ ರಹಿತ ಭಾರತವನ್ನು ತೋರಿಸುವ ಮೂಲಕ ಆಸ್ಟ್ರೇಲಿಯಾ ವಿದೇಶಾಂಗ ಇಲಾಖೆ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ತಕ್ಷಣವೇ ಎಚ್ಚೆತ್ತ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಸುಜಾತಾ ಸಿಂಗ್ ಆಸ್ಟ್ರೇಲಿಯಾ ಕ್ರಮವನ್ನು ವಿರೋಧಿಸಿದ್ದಾರೆ. ಅಲ್ಲದೇ ಮಾಡಿರುವ ತಪ್ಪಿಗೆ ಬೇಷರತ್ ಕ್ಷಮೆ ಯಾಚಿಸುವಂತೆ ಅಧಿಕಾರಿಗಳಿಗೆ ಸುಜಾತಾ ಸಿಂಗ್ ಒತ್ತಾಯಿಸಿದ್ದಾರೆ.

ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಾಶ್ಮೀರ ರಹಿತ ಭಾರತದ ಭೂಪಟವನ್ನು ಪ್ರದರ್ಶಿಸಿದ್ದಕ್ಕೆ ಕಾರ್ಯಕ್ರಮದ ಆಯೋಜಕರು ಬೇಷರತ್ ಕ್ಷಮೆಯಾಚಿಸಿದ್ದಾರೆ ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ಸಯ್ಯದ್ ಅಕ್ಬರುದ್ದೀನ್ ಟ್ವೀಟ್ ಮಾಡಿದ್ದಾರೆ. ವಿವಿಧ ದೇಶಗಳ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲಿ ಭಾರತದ ನಕ್ಷೆಯನ್ನು ಕಾಶ್ಮೀರ ರಹಿತವಾಗಿ ತೋರಿಸಿದ್ದು ಪ್ರಧಾನಿಯ ಗಮನಕ್ಕೂ ಬಂದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರಿಗೆ ತೀವ್ರ ಮುಜುಗರ ಉಂಟಾಗಿದೆ.

ಮೋದಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆ, ಬ್ರಿಟನ್ ಪ್ರಧಾನಿ ಡೇವಿಡ್ ಕೆಮಾರೂನ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited