Untitled Document
Sign Up | Login    
Dynamic website and Portals
  
November 17, 2014

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಸಂಭವವಿದೆ: ಬಿಎಸ್ ವೈ

ಬಿ.ಎಸ್.ಯಡಿಯೂರಪ್ಪ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ : ರಾಜ್ಯದಲ್ಲಿ ಸರ್ಕಾರ ಇದೆಯೇ ಇಲ್ಲವೇ ಎಂಬ ಅನುಮಾನದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಾರ್ವಜನಿಕರು ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕುತಿದ್ದಾರೆ. ಸರ್ಕಾರ ಇದೆಯೋ ಇಲ್ಲವೋ ಎಂಬ ವಾತಾವರಣ ನಿರ್ಮಾಣವಾಗಿದೆ ಎಂದರು.

ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ. ವರ್ಗಾವಣೆಗಾಗಿ ಕೋಟ್ಯಂತರ ರೂ. ವಸೂಲಿ ಮಾಡಲಾಗುತ್ತಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ರಾಜ್ಯಸರ್ಕಾರದ ವೈಫಲ್ಯ ಖಂಡಿಸಿ ನ.20ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಎಲ್ಲಾ ಜಿಲ್ಲಾ ಕೇಂದ್ರದ ಕಾರ್ಯಕರ್ತರೂ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಸುಮಾರು 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಆಗಮಿಸುವ ನಿರೀಕ್ಷೆಯಿದೆ. ಬೆಳಗಾವಿ ಅಧಿವೇಶನದ ವೇಳೆಯೂ ಬಿಜೆಪಿ, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವ ಸಂಭವವಿದೆ ಎಂದು ಭವಿಷ್ಯ ನುಡಿದ ಅವರು, ಯಾವುದೇ ಕ್ಷಣದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, 150 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited