ನವದೆಹಲಿ : 'ಮಹಾರಾಷ್ಟ್ರ' ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿದ್ದ ಶಿವಸೇನೆ, ಮತ್ತೊಮ್ಮೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ.
ಶಿವಸೇನೆ ಹಾಗೂ ಬಿಜೆಪಿ ಮೈತ್ರಿಗೆ ಮೋಹನ್ ಭಾಗವತ್ ಸಂಧಾನ ನಡೆಸಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳಲಿವೆ ಎಂದು ಹೇಳಲಾಗಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರೊಂದಿಗೆ ಮಾತುಕತೆ ನಡೆಸಿರುವ ಮೋಹನ್ ಭಾಗವತ್ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಬೆಂಬಲ ನೀಡುವಂತೆ ಮನವೊಲಿಕೆ ಮಾಡಿದ್ದಾರೆ.
ಹಿಂದುತ್ವದ ಆಧಾರದಲ್ಲಿ ಶಿವಸೇನೆ ಮತ್ತೆ ಬಿಜೆಪಿ ಮೈತ್ರಿಕೂಟಕ್ಕೆ ಮರಳಲಿದ್ದು ಬಿಜೆಪಿ ನೇತೃತ್ವದ ಸರ್ಕಾರದೊಂದಿಗೆ ಕೈಜೋಡಿಸುವ ಸಾಧ್ಯತೆ ಇದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನೆ ಮುಖ್ಯಸ್ಥ ಮನೋಹರ್ ಜೋಷಿ, ಮತ್ತೆ ಶಿವಸೇನೆ ಬಿಜೆಪಿಯೊಂದಿಗೆ ಕೈಜೋಡಿಸಲಿದೆ ಎಂದು ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಪಕ್ಷದ ಮುಖಂಡ ಉದ್ಧವ್ ಠಾಕ್ರೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.