Untitled Document
Sign Up | Login    
Dynamic website and Portals
  
November 18, 2014

ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಡುವುದಿಲ್ಲ:ಪವಾರ್ ಗೆ ಶಿವಸೇನೆ ತಿರುಗೇಟು

ಮುಂಬೈ : 'ಮಹಾರಾಷ್ಟ್ರ'ದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಎನ್.ಸಿ.ಪಿ ಮುಖಂಡ ಶರದ್ ಪವಾರ್ ನೀಡಿರುವ ಹೇಳಿಕೆಗೆ ಶಿವಸೇನೆ ಪ್ರತಿಕ್ರಿಯೆ ನೀಡಿದೆ. ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರು ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂಬ ಹೇಳಿಕೆ ನೀಡಿರುವ ಬೆನ್ನಲ್ಲೇ ಅಲ್ಪಮತದ ಸರ್ಕಾರ ರಚಿಸಿರುವ ಬಿಜೆಪಿ ಬೆಂಬಲಕ್ಕೆ ಶಿವಸೇನೆ ಧಾವಿಸಿದೆ. ಈ ಬೆಳವಣಿಗೆಯಿಂದ ಶಿವಸೇನೆ-ಬಿಜೆಪಿ ನಡುವೆ ಮರು ಮೈತ್ರಿ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ.

ಶರದ್ ಪವಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಿವಸೇನೆ ನಾಯಕ ಸಂಜಯ್ ರಾವತ್, ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವುದಕ್ಕೆ ಶಿವಸೇನೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶಿವಸೇನೆ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ ಎಂದು ಹೇಳಿದ್ದಾರೆ.

ಶಿವಸೇನೆಯ ಈ ಹೇಳಿಕೆ ಮೂಲಕ 25 ವರ್ಷಗಳ ಮಹಾ ಮೈತ್ರಿ ಮತ್ತೆ ಮುಂದುವರೆಯುವುದು ಖಚಿತವಾಗಿದೆ. ಇದಕ್ಕೂ ಮುನ್ನ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆಯೊಂದಿಗೆ ಮಾತುಕತೆ ನಡೆಸಿದ್ದ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಹಿಂದುತ್ವದ ಆಧಾರದಲ್ಲಿ ಉಭಯ ಪಕ್ಷಗಳೂ ಮೈತ್ರಿಗೆ ಮುಂದಾಗಬೇಕು ಎಂದಿದ್ದರು.

ನ.18ರಂದು ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ಆಲಿಭಾಗ್ ನಲ್ಲಿ ನಡೆಯುತ್ತಿರುವ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಪವಾರ್, 'ಮಹಾರಾಷ್ಟ್ರದಲ್ಲಿ ನಡೆಯುವ ಹಠಾತ್ ಚುನಾವಣೆಗೆ ನಾವು ಸಿದ್ಧರಿರಬೇಕು' ಎಂದು ಕರೆ ನೀಡಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited