Untitled Document
Sign Up | Login    
Dynamic website and Portals
  
November 18, 2014

ಗುಜರಾತಿಗಳಿಗೆ ಸುಳ್ಳು ಹೇಳುವುದೇ ಅಭ್ಯಾಸ: ಮೋದಿ ವಿರುದ್ಧ ಮುಲಾಯಂ ವಾಗ್ದಾಳಿ

ಎಸ್.ಪಿ ಮುಖಂಡ ಮುಲಾಯಂ ಸಿಂಗ್ ಯಾದವ್ ಎಸ್.ಪಿ ಮುಖಂಡ ಮುಲಾಯಂ ಸಿಂಗ್ ಯಾದವ್

ನವದೆಹಲಿ : ಗುಜರಾತಿಗಳಿಗೆ ಸುಳ್ಳು ಹೇಳುವುದೇ ಅಭ್ಯಾಸ ಎಂದು ಹೇಳುವ ಮೂಲಕ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಮತ್ತೊಂದು ವಿವಾದ ಸೃಷ್ಠಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಗುಜರಾತಿಗಳಿಗೆ ಸುಳ್ಳು ಹೇಳುವುದೇ ಅಭ್ಯಾಸ ಎಂದು ಹೇಳಿರುವ ಮುಲಾಯಂ ಸಿಂಗ್ ಯಾದವ್, ಮೋದಿ ಚುನಾವಣೆಗೂ ಮುನ್ನ ದೇಶದ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ.

ಸಮಾಜವಾದಿ ಪಕ್ಷದ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಮೋದಿ ತಮ್ಮ ಪತ್ನಿಯನ್ನೇ ಮರೆತಿದ್ದಾರೆ, ಇನ್ನು ದೇಶದ ಮಹಿಳೆಯರ ಸಬಲೀಕರಣ ಹೇಗೆ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಮುಲಾಯಂ ಸಿಂಗ್ ಯಾದವ್ ಅವರ ಈ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಮುಲಾಯಂ ಸಿಂಗ್ ಯಾದವ್ ಪ್ರಧಾನಿ ನರೇಂದ್ರ ಮೋದಿ ಅವರ ವಯಕ್ತಿಕ ಜೀವನದ ಬಗ್ಗೆ ಅವಹೇಳನ ಮಾಡಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿರೋಧಕ್ಕೆ ಗುರಿಯಾಗುವ ಸಾಧ್ಯತೆಗಳಿವೆ. ಪ್ರಧಾನಿ ಮೋದಿ ಅವರ ಆಡಳಿತ ವೈಖರಿಯನ್ನು ಹೊಗಳಿದ್ದ ಮುಲಾಯಂ ಸಿಂಗ್ ಯಾದವ್ ಸೊಸೆ ಡಿಂಪಲ್ ಯಾದವ್ ಕೂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited