Untitled Document
Sign Up | Login    
Dynamic website and Portals
  
November 19, 2014

ಕಿಸ್ ಆಫ್ ಲವ್ ಗೆ ಸಿ.ಎಂ ವಿರೋಧ: ಅಶ್ಲೀಲ ಪ್ರತಿಭಟನೆಗೆ ಕಾನೂನು ಕ್ರಮದ ಎಚ್ಚರಿಕೆ

ಸಿ.ಎಂ ಸಿದ್ದರಾಮಯ್ಯ ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು : 'ನೈತಿಕ ಪೊಲೀಸ್ ಗಿರಿ' ವಿರೋಧಿಸಿ ಬೆಂಗಳೂರಿನಲ್ಲಿ ನ.22ರಂದು ಆಯೋಜಿಸಲಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕಿಸ್ ಡೇ ಬಗ್ಗೆ ಪ್ರತಿಕ್ರಿಯಿಸಿರುವ ಸಿ.ಎಂ, ಕಿಸ್ ಆಫ್ ಲವ್ ಪ್ರತಿಭಟನೆಗೆ ಅಸಮಾಧಾನ ವ್ಯಕ್ತಪಡಿಸಿದ್ದು. ಅಶ್ಲೀಲ-ಅಸಭ್ಯವಾಗಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಕಾನೂನು ಚೌಕಟ್ಟಿನಲ್ಲಿ ನೈತಿಕ ಪೊಲೀಸ್ ಗಿರಿ ವಿರುದ್ಧ ಪ್ರತಿಭಟನೆ ನಡೆಸಲಿ, ಆದರೆ ಬೀದಿಗಳಲ್ಲಿ ಕಿಸ್ ಡೇ ಆಚರಿಸುವ ಮೂಲಕ ಅಶ್ಲೀಲವಾಗಿ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಅಸಭ್ಯರೀತಿಯ ಪ್ರತಿಭಟನೆ ಎಂದೇ ಬಿಂಬಿತವಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ಗೃಹ ಸಚಿವ ಜಾರ್ಜ್ ಕೂಡ ವಿರೋಧ ವ್ಯಕ್ತಪಡಿಸಿದ್ದರು. ಅಶ್ಲೀಲವಾಗಿ ಪ್ರತಿಭಟನೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿ ನಡೆಯಲಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿದೆ. ಈ ಕಾರ್ಯಕ್ರಮ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದರೆ. ಸರ್ಕಾರ ಇಂತಹ ಪ್ರತಿಭಟನೆಗಳಿಗೆ ಅವಕಾಶ ನೀಡಬಾರದು ಎಂದು ಹಿರಿಯ ಸಂಶೋಧಕ ಚಿದಾನಂದ ಮೂರ್ತಿ ಅಭಿಪ್ರಾಯಪಟ್ಟಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited