ಬೆಂಗಳೂರು : ನಿಗಮ ಮಂಡಳಿ ನೇಮಕಾತಿ ಪಟ್ಟಿ ಅಂತಿಮಗೊಳಿ, ನಾಳೆಯೊಳಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪಟ್ಟಿ ನೀಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಾಕೀತು ಮಾಡಿದ್ದಾರೆ.
ಒಂದಲ್ಲ ಒಂದು ಕಾರಣಗಳಿಂದ ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೆ ಎರಡುಬಾರಿ ಸೂಚನೆ ನೀಡಿರುವ ದಿಗ್ವಿಜಯ್ ಸಿಂಗ್, ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಗೆ ಖಡಕ್ ಆಗಿ ತಾಕೀತು ಮಾಡಿದ್ದು, ನಾಳೆಯೊಳಗೆ ಪಟ್ಟಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಈ ಹಿನ್ನಲೆಯಲ್ಲಿ ನ.20ರಂದು ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ದೆಹಲಿಗೆ ತೆರಳುತ್ತಿದ್ದು, ಸೋನಿಯಾ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ. ಯಾರಿಗೆ ಯಾವ ಸ್ಥಾನ ನಿಡಬೇಕೆಂಬ ಬಗ್ಗೆ ದೆಹಲಿಯಲ್ಲಿಯೇ ನಿರ್ಧಾರ ಕೈಗೊಳ್ಳಲಿದ್ದಾರೆ.