Untitled Document
Sign Up | Login    
Dynamic website and Portals
  
November 19, 2014

ಮಹಾ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ: ಶರದ್ ಪವಾರ್

ಎನ್.ಸಿ.ಪಿ ಮುಖಂಡ  ಶರದ್ ಪವಾರ್ ಎನ್.ಸಿ.ಪಿ ಮುಖಂಡ ಶರದ್ ಪವಾರ್

ಮುಂಬೈ : ಮಹಾರಾಷ್ಟ್ರದ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ತಮ್ಮ ಪಕ್ಷಕ್ಕೆ ಇಲ್ಲ ಎಂದು ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ.

ಮುಂಬೈ ನಲ್ಲಿ ಕಳೆದ 2 ದಿನಗಳಿಂದ ನಡೆಯುತ್ತಿದ್ದ ಎನ್.ಸಿ.ಪಿ ಪಕ್ಷದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶರ್ದ್ ಪವಾರ್ ಮಧ್ಯಂತರ ಚುನಾವಣೆ ಬಗ್ಗೆ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವುದಾಗಿ ಎಲ್ಲಿಯೂ ಹೇಳಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಸರ್ಕಾರ ರಚನೆಗೂ ಮುನ್ನ ಹೇಳಿದ್ದ ಮಾತನ್ನೇ ಈಗಲೂ ಹೇಳುತ್ತಿದ್ದೇವೆ, ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವುದು ನಮ್ಮ ಉದ್ದೇಶವಲ್ಲ. ಒಂದು ವೇಳೆ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿ ಬಿಜೆಪಿ ನಡೆದುಕೊಂಡರೆ ಮಾತ್ರ ಬಾಹ್ಯ ಬೆಂಬಲದ ಕುರಿತು ಯೋಚನೆ ಮಾಡಬೇಕಾಗುತ್ತದೆ ಎಂದು ಶರದ್ ಪವಾರ್ ತಿಳಿಸಿದ್ದಾರೆ.

ಸಮಾವೇಶದ ಮೊದಲನೇ ದಿನ, ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಹೇಳಿದ್ದ ಶರದ್ ಪವಾರ್, ಬಿಜೆಪಿ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುವ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದರು. ಎನ್.ಸಿ.ಪಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದ ಶಿವಸೇನೆ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited