ನವದೆಹಲಿ : 'ಲಡಾಕ್' ನಲ್ಲಿರುವ ಅಕ್ಸಾಯ್ ಚಿನ್ ಪ್ರದೇಶವನ್ನು ಚೀನಾ ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.
ಟ್ವಿಟರ್ ಮೂಲಕ ಚೀನಾ ವಿರುದ್ಧ ಗುಡುಗಿರುವ ರಾಜನಾಥ್ ಸಿಂಗ್, ಭಾರತದ ಗಡಿ ಪ್ರದೇಶವನ್ನು ಅಕ್ರಮವಾಗಿ ವಶಪಡಿಸಿಕೊಳ್ಳುವುದೂ ಅಲ್ಲದೇ ಭಾರತದ ಗಡಿ ಪ್ರದೇಶದಲ್ಲಿ ಅತಿಕ್ರಮಣ ನಡೆಸುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಸಿಂಗ್ ಹೇಳಿದ್ದಾರೆ.
ಭಾರತ, ಚೀನಾದೊಂದಿಗೆ ಉತ್ತಮ ಬಾಂಧವ್ಯ ಕಾಪಾಡಿಕೊಳ್ಳಬೇಕಾದರೆ, ಚೀನಾ ಸಹ ಅದಕ್ಕೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ.
ಇದೇ ವೇಳೆ ಗಡಿ ಸಮಸ್ಯೆಗಳಿಗೆ ಕಾಂಗ್ರೆಸ್ ಪಕ್ಷವೇ ಹೊಣೆ ಎಂದಿರುವ ಅವರು, ಕಾಂಗ್ರೆಸ್ ಪಕ್ಷಕ್ಕೆ ಅಕ್ಸಾಯ್ ಚಿನ್ ಒಣ ಮರುಭೂಮಿ ಇರಬಹುದು ಆದರೆ ಅದನ್ನು ಉತ್ತಮ ಪ್ರವಾಸಿ ತಾಣವನ್ನಾಗಿ ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.