Untitled Document
Sign Up | Login    
Dynamic website and Portals
  
November 22, 2014

ನಿಗಮ ಮಂಡಳಿಯಲ್ಲಿ ಸ್ಥಾನ ಸಿಗದ ಹಿನ್ನಲೆ: ಕಾಂಗ್ರೆಸ್ ನಾಯಕನಿಂದ ಆತ್ಮಹತ್ಯೆ ಯತ್ನ

ಮೈಸೂರು : ನಿಗಮ-ಮಂಡಳಿಯಲ್ಲಿ ಅವಕಾಶ ಸಿಗದೆ ಇದ್ದುದರಿಂದ ಮನನೊಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಮ್ಮ ಪುತ್ರನೊಂದಿಗೆ ಆತ್ಮಹತ್ಯೆ ಯತ್ನ ಮಾಡಿರುವ ಘಟನೆ ನಡೆದಿದೆ.

ಮೈಸೂರಿನ ಇಟ್ಟಿಗೆಗೂಡು ಪ್ರದೇಶದ ನಿವಾಸಿ 58ವರ್ಷದ ಪ್ರಭಾಕರ್ ಹಾಗೂ ಅವರ ಪುತ್ರ 35 ವರ್ಷದ ಪ್ರತಾಪ್, ನಿದ್ದೆಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಭಾಕರ್ ಅವರು ಸುಮಾರು 40 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಸಕ್ರಿಯ ಕಾರ್ಯಕರ್ತರಾಗಿ ದುಡಿಯುತ್ತಿದ್ದರು. ಈ ಹಿಂದೆ ಹಿರಿಯ ಶಾಸಕ ತನ್ವೀರ್ ಸೇಠ್ ಅವರ ಪಾಳಯದಲ್ಲಿ ಗುರುತಿಸಿಕೊಂಡಿದ್ದ ಪ್ರಭಾಕರ್ ಇತ್ತೀಚೆಗೆ ಸಿದ್ದರಾಮಯ್ಯನವರ ಜತೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದರು. ನಜರಾಬಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಹೀಗಾಗಿ ತಮಗೆ ಅಥವಾ ತಮ್ಮ ಪುತ್ರನಿಗೆ ನಿಗಮ-ಮಂಡಳಿಯಲ್ಲಿ ಅವಕಾಶ ಸಿಕ್ಕೇ ಸಿಗಲಿದೆ ಎಂಬ ನಿರೀಕ್ಷೆ ಹೊಂದಿದ್ದರು.

ನವದೆಹಲಿಯಲ್ಲಿ ಪಟ್ಟಿ ಅಂಗೀಕಾರಗೊಂಡ ನಂತರ ಹಲವು ನಾಯಕರನ್ನು ಸಂಪರ್ಕಿಸಿ ತಮ್ಮ ಹೆಸರಿದೆಯೇ ಎಂದು ತಿಳಿದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಇಲ್ಲ ಎಂಬುದು ಖಚಿತವಾಗುತ್ತಿದ್ದಂತೆ ತೀವ್ರ ಮನನೊಂದ ಅವರು ರಾತ್ರಿ ಊಟ ಮಾಡಿದ ನಂತರ ಪುತ್ರ ಪ್ರತಾಪ್ ಜತೆ ನಿದ್ದೆ ಮಾತ್ರೆ ಸೇವಿಸಿದ್ದಾರೆ. ಬೆಳಿಗ್ಗೆ ಎಷ್ಟು ಹೊತ್ತಾದರೂ ತಂದೆ-ಮಗ ಎದ್ದೇಳದೆ ಇರುವುದನ್ನು ಗಮನಿಸಿದ ಮನೆಯವರು ಕೊಠಡಿಯೊಳಗೆ ಹೋದಾಗ ಅಸ್ವಸ್ಥರಾಗಿರುವುದು ಪತ್ತೆಯಾಗಿದೆ. ತಕ್ಷಣವೇ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಬ್ಬರೂ ಪ್ರಜ್ಞೆ ತಪ್ಪಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಜರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited