Untitled Document
Sign Up | Login    
Dynamic website and Portals
  
November 24, 2014

ಭಾರತ-ಚೀನಾ ಗಡಿ ವಿವಾದ ಬಗೆಹರಿಸಲು ಕ್ರಮ: ವಿಶೇಷ ಪ್ರತಿನಿಧಿಯಾಗಿ ಅಜಿತ್ ದೋವೆಲ್ ನೇಮಕ

ರಾಷ್ಟ್ರೀಯ ಭದ್ರತಾ ಸಲಹೆಗಾರ  ಅಜಿತ್ ದೋವೆಲ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್

ನವದೆಹಲಿ : 'ರಾಷ್ಟ್ರೀಯ ಭದ್ರತಾ ಸಲಹೆಗಾರ' ಅಜಿತ್ ದೋವೆಲ್ ಗೆ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಜವಾಬ್ದಾರಿ ವಹಿಸಿದೆ. ಭಾರತ-ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಜಿತ್ ದೋವೆಲ್ ಅವರನ್ನು ನ.24ರಂದು ಕೇಂದ್ರ ಸರ್ಕಾರ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿದೆ.

ಉಭಯ ರಾಷ್ಟ್ರಗಳ ನಡುವೆ ಗಡಿ ವಿವಾದ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಅಜಿತ್ ದೋವೆಲ್ ಅವರನ್ನು ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಅಜಿತ್ ದೋವೆಲ್ ಅವರು ಚೀನಾ ಹಾಗೂ ಮಯನ್ಮಾರ್ ಗೆ ಸಂಬಂಧಿಸಿದಂತೆ ಪ್ರಮುಖ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಗಡಿ ಪ್ರದೇಶದಲ್ಲಿ ಚೀನಾ ಅತಿಕ್ರಮಣ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಸೆಪ್ಟೆಂಬರ್ ನಲ್ಲಿ ಲಡಾಖ್ ಪ್ರದೇಶದಲ್ಲಿ ಚೀನಾ ಸೈನಿಕರು ಅತಿಕ್ರಮಣ ನಡೆಸಿದ್ದರು. ಅಲ್ಲದೇ ಅರುಣಾಚಲ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಸೇರಿದಂತೆ ಭಾರತ ಸರ್ಕಾರ ಕೈಗೊಂಡಿರುವ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚೀನಾ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಚೀನಾದೊಂದಿಗಿನ ಗಡಿ ವಿವಾದವನ್ನು ಬಗೆ ಹರಿಸಲು ದೋವೆಲ್ ಅವರನ್ನು ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited