ನವದೆಹಲಿ : 'ಬಿಜೆಪಿ' ಸಂಸದರು ತಮ್ಮ ಆಸ್ತಿ ವಿವರಗಳನ್ನು ಘೋಷಿಸಿಕೊಳ್ಳುವುದಕ್ಕೆ ಪ್ರಧಾನಿ ನರೇಂದ್ರ ಮೋದಿ 48 ಗಂಟೆಗಳ ಗಡುವು ನೀಡಿದ್ದಾರೆ.
ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದಿದ್ದರೂ ಈವರೆಗೂ ಅನೇಕ ಸಂಸದರು ತಮ್ಮ ಆಸ್ತಿ ವಿವರ ಘೋಶಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ 48 ಗಂಟೆಗಳ ಗಡುವು ವಿಧಿಸಿದ್ದಾರೆ.
ಒಂದೆಡೆ ಕಪ್ಪು ಹಣ ವಾಪಸ್ ತರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ನಲ್ಲಿ ಗದ್ದಲ ಉಂಟಾಗಿದ್ದರೆ. ಮತ್ತೊಂದೆಡೆ ಬಿಜೆಪಿ ಸಂಸದರು ಆಸ್ತಿ ವಿವರಣೆ ಘೋಷಣೆ ಮಾಡದೇ ಇರುವುದೂ ಸಹ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಆಸ್ತಿ ವಿವರಗಳನ್ನು ಘೋಷಿಸಬೇಕೆಂದು ಪ್ರಧಾನಿ ಮೋದಿ ಆದೇಶಿಸಿದ್ದಾರೆ.
ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬರುವುದಕ್ಕೂ ಮುನ್ನ ಪ್ರಧಾನಿ ಅಭ್ಯರ್ಥಿಯಾಗಿದ್ದ ಮೋದಿ, ಕಪ್ಪು ಹಣವನ್ನು 100 ದಿನಗಳಲ್ಲಿ ವಾಪಸ್ ತರುವುದಾಗಿ ಭರವಸೆ ನೀಡಿದ್ದರು. ಇದೇ ವಿಷಯವನ್ನು ಪ್ರಮುಖವಾಗಿ ಪರಿಗಣಿಸಿರುವ ವಿರೋಧಪಕ್ಷಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.