Untitled Document
Sign Up | Login    
Dynamic website and Portals
  
November 27, 2014

81ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ದಲಿಂಗಯ್ಯ ಅಧ್ಯಕ್ಷತೆ ಸಾಧ್ಯತೆ

ಸಿದ್ದಲಿಂಗಯ್ಯ ಸಿದ್ದಲಿಂಗಯ್ಯ

ಬೆಂಗಳೂರು : 'ಶ್ರವಣಬೆಳಗೊಳ'ದಲ್ಲಿ ನಡೆಯಲಿರುವ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ದಲಿತ ಕವಿ ಸಿದ್ದಲಿಂಗಯ್ಯ ಆಯ್ಕೆಯಾಗುವ ಸಾಧ್ಯತೆ ಇದೆ.

2015ರ ಫೆಬ್ರವರಿ 1ರಿಂದ 3ವರೆಗೆ ನಡೆಯಲಿರುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಿದ್ದಲಿಂಗಯ್ಯ ಅವರನ್ನು ಆಯ್ಕೆ ಮಾಡಲು ಎಲ್ಲಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಈ ಬಾರಿಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಸ್ಥಾನಕ್ಕೆ ದಲಿತ ಲೇಖಕರನ್ನು ಪರಿಗಣಿಸಲಾಗುತ್ತಿದೆ ಎಂದು ಕಳೆದ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲಿಕ ಹಾಲಂಬಿ ಅವರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ದಲಿತ ಕವಿ ಸಿದ್ದಲಿಂಗಯ್ಯ ಆಯ್ಕೆ ಬಹುತೇಕ ಖಚಿತವಾಗಿದೆ. ಸಿದ್ದಲಿಂಗಯ್ಯ ಅವರು ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಕರ್ನಾಟಕ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಕವಿತಾ ವಾಚನ, ಪುಸ್ತಕ ಪ್ರದರ್ಶನ ಮುಂತಾದವುಗಳನ್ನು ಒಳಗೊಂಡ ಸಮ್ಮೇಳನ ಪ್ರತಿ ವರ್ಷ ಲಕ್ಷಾಂತರ ಜನರನ್ನು ಆಕರ್ಷಿಸುತ್ತದೆ.

 

 

Share this page : 
 

More News From : Art & Culture

ಅರಮನೆ ನಗರಿಯಲ್ಲಿ ಕಳೆಕಟ್ಟಿದ ಜಂಬೂಸವಾರಿ ಮೆರವಣಿಗೆ: ಮನಸೂರೆಗೊಳ್ಳುತ್ತಿದೆ ಸಾಂಸ್ಕೃತಿಕ ಕಲಾತಂಡಗಳ ವೈಭವ
 • ಅರಮನೆ ನಗರಿಯಲ್ಲಿ ಕಳೆಕಟ್ಟಿದ ಜಂಬೂಸವಾರಿ ಮೆರವಣಿಗೆ: ಮನಸೂರೆಗೊಳ್ಳುತ್ತಿದೆ ಸಾಂಸ್ಕೃತಿಕ ಕಲಾತಂಡಗಳ ವೈಭವ
 • ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ವೈಭವದ ಚಾಲನೆ ದೊರೆತಿದ್ದು, ಅರಮನೆ ನಗರಿಯಲ್ಲಿ ರಾಜ ಗಾಂಭೀರ್ಯದಿಂದ ಸಾಗುತ್ತಿರುವ ಗಜೆಪಡೆಗಳು, ಸಾಂಸ್ಕೃತಿಕ ಕಲಾತಂಡಗಳು, ಚಿತ್ತಾಕರ್ಷಕ ಸ್ತಬ್ದಚಿತ್ರಗಳು ಕಣ್ಮನಸೆಳೆಯುತ್ತಿವೆ.
 • ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ
 • ಯಕ್ಷಗಾನ ಮಾಹಿತಿಗಾಗಿ ಮೊಬೈಲ್ ಆಪ್!!!
 • The Ultimate Job Portal
  Netzume - Resume Website Gou Products

  Other News

  Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
  © bangalorewaves. All rights reserved. Developed And Managed by Rishi Systems P. Limited