Untitled Document
Sign Up | Login    
Dynamic website and Portals
  
November 29, 2014

ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಮಾಡಿ: ಸಿಎಂಗೆ ದಿಗ್ವಿಜಯ್ ಸಿಂಗ್ ಸೂಚನೆ

ಬೆಂಗಳೂರು : ಒಂದಲ್ಲ ಒಂದು ಕಾರಣ ನೀಡಿ ಸಂಪುಟ ಪುನಾರಚನೆಯನ್ನು ಮುಂದೂಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್, ಬೆಳಗಾವಿ ಅಧಿವೇಶನಕ್ಕು ಮುನ್ನವೇ ಸಂಪುಟ ಪುನಾರಚನೆ ಮಾಡುವಂತೆ ಸಿಎಂಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ಡಿಸೆಂಬರ್ 9ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನವೆ ಸಂಪುಟ ಪುನಾರಚನೆ ಮಾಡುವಂತೆ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು ಸಿದ್ದರಾಮಯ್ಯ ಅವರಿಗೆ ಗುರುವಾರ ದೂರವಾಣಿ ಮೂಲಕ ಸೂಚಿಸಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಬೆಳಗಾವಿ ಅಧಿವೇಶನಕ್ಕು ಮುನ್ನ ಸಂಪುಟ ಪುನಾರಚನೆ ಮಾಡುವಂತೆ ಸಿದ್ದರಾಮಯ್ಯಗೆ ಸೂಚಿಸುವಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ತಮಗೆ ಹೇಳಿದ್ದಾರೆ. ಅದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ ಎಂದು ದಿಗ್ವಿಜಯ್ ಸಿಂಗ್ ಸಿಎಂಗೆ ಹೇಳಿದ್ದಾರೆ.

ದಿಗ್ವಿಜಯ್ ಸಿಂಗ್ ಸೂಚನೆಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ, ಸಂಪುಟ ಪುನಾರಚನೆಗೆ ಕಾಲವಕಾಶ ಕೇಳಿದ್ದು, ಚಳಿಗಾಲದ ಅಧಿವೇಶನ ಬಳಿಕ ಸಂಪುಟ ಪುನಾರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ.ಅಲ್ಲದೇ ಈ ವೇಳೆ ಕನಿಷ್ಠ 6 ರಿಂದ 7 ಸಚಿವರನ್ನು ಸಂಪುಟದಿಂದ ಕೈ ಬಿಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ ಇದಕ್ಕೆ ಒಪ್ಪದ ದಿಗ್ವಿಜಯ್ ಸಿಂಗ್ ಅವರು, ಒಂದೇರಡು ದಿನಗಳಲ್ಲಿ ಸಂಪುಟ ಪುನಾರಚನೆ ಪಟ್ಟಿಯೊಂದಿಗೆ ತಮ್ಮನ್ನು ಭೇಟಿ ಮಾಡಿ ಎಂದು ತಾಕೀತು ಮಾಡಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಸಂಪುಟದಲ್ಲಿರುವ ಕೆಲವು ಅಸಮರ್ಥ ಸಚಿವರಿಂದ ಪಕ್ಷ ಕಟ್ಟಲು ಸಾಧ್ಯವಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕೆಲವು ಸಚಿವರನ್ನು ಸಂಪುಟದಿಂದ ಕೈ ಬಿಟ್ಟು, ಸಮರ್ಥರಿಗೆ ಅವಕಾಶ ನೀಡಲು ಹೈಕಮಾಂಡ್ ನಿರ್ಧರಿಸಿದೆ. ಅಲ್ಲದೆ ಕನಿಷ್ಠ 10 ಸಚಿವರನ್ನು ಸಂಪುಟದಿಂದ ಕೈ ಬಿಟ್ಟು, ಹೊಸ ಮೂಖಗಳಿಗೆ ಅವಕಾಶ ನೀಡಲು ಹೈಕಮಾಂಡ್ ಬಯಸಿದೆ ಎನ್ನಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited