Untitled Document
Sign Up | Login    
Dynamic website and Portals
  
November 30, 2014

ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಸರಿಯಲ್ಲ: ಸಂತೋಷ್ ಹೆಗ್ಡೆ

ಬೆಂಗಳೂರು : ಕರ್ನಾಟಕ ಲೋಕಾಯುಕ್ತ ಕಾಯ್ದೆ ವಿಶ್ವದಲ್ಲೇ ಅತ್ಯಂತ ಬಲಿಷ್ಠ ಹಾಗೂ ಸಮರ್ಪಕವಾದ ಕಾಯ್ದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ತಿದ್ದುಪಡಿ ತರುವ ಪ್ರಯತ್ನ ನಡೆಸಿದ್ದಾರೆ, ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭ್ರಷ್ಟಾಚಾರ ತಡೆಗಟ್ಟಲು ಮತ್ತು ಜನರಿಗೆ ಸೂಕ್ತ ಸರ್ಕಾರಿ ಸೌಲಭ್ಯ ದೊರಕಿಸಲು ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆ ಅತ್ಯಂತ ಬಲಿಷ್ಠವಾದ ಆಯುಧ. ಆದರೆ ಇದಕ್ಕೆ ತಿದ್ದುಪಡಿ ತಂದು ದುರ್ಬಲಗೊಳಿಸುವ ಪ್ರಯತ್ನಗಳು ನಡೆದಿವೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದರು.

ಸಿದ್ದರಾಮಯ್ಯ ಅವರ ಸರ್ಕಾರದಲ್ಲೂ ಬಹಳಷ್ಟು ಸಚಿವರ ಮೇಲೆ ಆರೋಪಗಳಿವೆ. ಹೀಗಾಗಿ ಸಿದ್ದರಾಮಯ್ಯ ಅವರ ಸರ್ಕಾರ ಭ್ರಷ್ಟಾಚಾರ ಮುಕ್ತವಾಗಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited