ಬೆಂಗಳೂರು : ಮಾಜಿ ಕೇಂದ್ರ ಸಚಿವ, ಸಂಸದ ವೀರಪ್ಪ ಮೋಯ್ಲಿಗೆ ಡಿ.1ರಂದು ಹೈಕೋರ್ಟ್ ನೊಟೀಸ್ ನೀಡಿದೆ.
2014ರ ಲೋಕಸಭಾ ಚುನಾವಣೆ ವೇಳೆ ಪ್ರಚಾರಕ್ಕಾಗಿ ಮಿತಿಮೀರಿದ ಹಣ ಬಳಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕೋರ್ಟ್, ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೋಯ್ಲಿಗೆ ನೊಟೀಸ್ ಜಾರಿ ಮಾಡಿದೆ.
ಕಳೆದ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹಣ ಬಳಕೆಗೆ 70 ಲಕ್ಷ ಮಿತಿ ಇದ್ದರೂ, ಮೊಯ್ಲಿ 73 ಲಕ್ಷ ರೂಪಾಯಿ ಹಣವನ್ನು ಪ್ರಚಾರಕ್ಕೆ ಬಳಕೆ ಮಾಡಿಕೊಂಡಿದ್ದಾರೆಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಪರಾಜಿತ ಅಭ್ಯರ್ಥಿ ಬಚ್ಚೇಗೌಡರು ನೀಡಿದ್ದರು.
ಆದರೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಬಚ್ಚೇಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಚುನಾವಣಾ ಆಯೋಗ, ಮುಖ್ಯ ಚುನಾವಣಾ ಅಧಿಕಾರಿಗೂ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.
2014ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಿಂದ ಸಂಸದರಾಗಿ ವೀರಪ್ಪ ಮೋಯ್ಲಿ ಆಯ್ಕೆಯಾಗಿದ್ದಾರೆ.