Untitled Document
Sign Up | Login    
Dynamic website and Portals
  
December 1, 2014

ಛತ್ತೀಸ್ ಘಡದಲ್ಲಿ ನಕ್ಸಲರಿಂದ 13 ಸಿ.ಆರ್.ಪಿ.ಎಫ್ ಯೋಧರ ಹತ್ಯೆ

ರಾಯಪುರ : 'ಛತ್ತೀಸ್ ಘಡ'ದಲ್ಲಿ ನಕ್ಸಲರು ನಡೆಸಿರುವ ದಾಳಿಗೆ ಇಬ್ಬರು ಅಧಿಕಾರಿಗಳು ಸೇರಿದಂತೆ 13 ಮಂದಿ ಸಿ.ಆರ್.ಪಿ.ಎಫ್ ಯೋಧರು ಸಾವನ್ನಪ್ಪಿದ್ದಾರೆ.

ಸುಕ್ಮಾ ಜಿಲ್ಲೆಯಲ್ಲಿ ಡಿ.1ರಂದು ಸಂಜೆ ನಕ್ಸಲರು ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಸೇನಾ ಮೂಲಗಳ ಪ್ರಕಾರ ಈ ವರ್ಷದಲ್ಲಿ ನಕ್ಸಲರು ನಡೆಸಿದ ಅತಿ ದೊಡ್ಡ ಪ್ರಮಾಣದ ದಾಳಿ ಇದಾಗಿದ್ದು, ಸುಮಾರು 25ರಿಂದ 50 ಮಂದಿ ನಕ್ಸಲರು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಿ.ಆರ್.ಪಿ.ಎಫ್ ಯೋಧರ ಶಿಬಿರವನ್ನು ಗುರಿಯಾಗಿಸಿಕೊಂಡು ನಕ್ಸಲರು ಈ ದಾಳಿ ನಡೆಸಿದ್ದಾರೆ.

ಕಳೆದ ನವೆಂಬರ್ ತಿಂಗಳಿನಲ್ಲಿಯೂ ಸುಕ್ಮಾ ಜಿಲ್ಲೆಯ ದಟ್ಟಡವಿಯಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಗಾಯಗೊಂಡ ಯೋಧರನ್ನು ರವಾನೆ ಮಾಡಲು ಆಗಮಿಸಿದ್ದ ಸೇನಾ ಹೆಲಿಕಾಪ್ಟರ್ ಮೇಲೆಯೇ ನಕ್ಸಲರು ಗುಂಡಿನ ಮಳೆಗರೆದಿದ್ದರು. ಈ ವೇಳೆ 6 ಸಿ.ಆರ್.ಪಿ.ಎಫ್ ಸಿಬ್ಬಂದಿ ಹಾಗೂ ಓರ್ವ ಐಎಎಫ್ ಕಮಾಂಡೋ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ನಕ್ಸಲರು ಮತ್ತೆ ತಮ್ಮ ಕ್ರೌರ್ಯವನ್ನು ಮೆರೆದಿದ್ದಾರೆ.

ನಕ್ಸಲ್ ದಾಳಿ ನಡೆದ ಪ್ರದೇಶದಲ್ಲಿ ಸಿ.ಆರ್.ಪಿ.ಎಫ್ ಯೋಧರು ಕಳೆದ 10ದಿನಗಳಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದರು.

 

 

Related News

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited