Untitled Document
Sign Up | Login    
Dynamic website and Portals
  
December 2, 2014

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ಇನ್ನು ಮುಂದೆ ಉತ್ತಮ ಆಡಳಿತ ದಿನ

ಅಟಲ್ ಬಿಹಾರಿ ವಾಜಯೇಯಿ ಅವರೊಂದಿಗೆ ಪ್ರಧಾನಿ ಮೋದಿ ಅಟಲ್ ಬಿಹಾರಿ ವಾಜಯೇಯಿ ಅವರೊಂದಿಗೆ ಪ್ರಧಾನಿ ಮೋದಿ

ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಡಿ.25ನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಡಿ.25ರಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಅದ್ಧೂರಿಯಾಗಿ ನಡೆಯಲಿದ್ದು. ಉತ್ತಮ ಆಡಳಿತಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ಡಿ.2ರಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನ'ವನ್ನಾಗಿ ಆಚರಿಸಲು ತೀರ್ಮಾನಿಸಲಾಗಿದೆ.

ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರ ಸಚಿವಾಲಯದ ಸಚಿವ ರಾಜೀವ್ ಪ್ರತಾಪ್ ರೂಡಿ, ಡಿಸೆಂಬರ್ 25ಕ್ಕೆ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುವುದು. ಉತ್ತಮ ಆಡಳಿತದ ಸಂಕೇತವಾಗಿ ಡಿ. 25ನೇ ತಾರೀಖಿನಂದು ಎಲ್ಲರೂ ಉತ್ತಮ ಆಡಳಿತಕ್ಕೆ ಸಹಕಾರ ನೀಡಬೇಕೆಂದು ಹೇಳಿದ್ದಾರೆ.

ಆ ದಿನ ಎಲ್ಲ ಸಂಸದರು ಅವರವರ ಲೋಕಸಭಾ ಕ್ಷೇತ್ರದಲ್ಲಿ ಕ್ಲೀನ್ ಇಂಡಿಯಾ ಅಭಿಯಾನದಲ್ಲಿ ಪಾಲ್ಗೊಂಡು 1 ಗಂಟೆಗಳ ಕಾಲ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿರುವುದಾಗಿ ರೂಡಿ ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited