Untitled Document
Sign Up | Login    
Dynamic website and Portals
  
December 3, 2014

ಜಮ್ಮು-ಕಾಶ್ಮೀರದಲ್ಲಿ 5 ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದಲ್ಲಿ 5 ಉಗ್ರರ ಹತ್ಯೆ

ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದಲ್ಲಿ ಯೋಧರು, ಹಾಗೂ ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ 5ಜನ ಉಗ್ರರನ್ನು ಯೋಧರು ಹತ್ಯೆ ಮಾಡಿದ್ದಾರೆ.

ಕುಪ್ವಾರ ಜಿಲ್ಲೆಯಲ್ಲಿ ಡಿ.3ರಂದು ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ದಾಳಿನಡೆದಿದೆ. ಈ ದಾಳಿಯಲ್ಲಿ ಇಬ್ಬರು ಯೋಧರಿಗೆ ಗಂಭೀರ ಗಾಯಗಳುಂಟಾಗಿವೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿ.2ರಂದು ನಡೆದ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ಶಾಂತಿಯುತ ಮತದಾನಕ್ಕೆ ಭಂಗ ಉಂಟು ಮಾಡುವ ಉದ್ದೇಶದಿಂದ ಉಗ್ರರು ದಾಳಿ ನಡೆಸುತ್ತಿದ್ದರು.

ಉಗ್ರರ ಯೋಜನೆಯನ್ನು ವಿಫಲಗೊಳಿಸಲು ಸೇನೆ ಪ್ರತಿ ದಾಳಿ ನಡೆಸುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತ ಮತದಾನ ನಡೆಸಲು ಬಿಡುವುದಿಲ್ಲ ಎಂದು ಉಗ್ರರು ಸೇನೆಗೆ ಸವಾಲು ಹಾಕಿದ್ದರು. ರಾಜ್ಯದಲ್ಲಿ 5 ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು ಈ ಬಾರಿ ದಾಖಲೆ ಪ್ರಮಾಣದಲ್ಲಿ ಮತದಾನ ನಡೆದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited