ನವದೆಹಲಿ : ಮಾಜಿ ಕೇಂದ್ರ ಸಚಿವ ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನವದೆಹಲಿಯಲ್ಲಿ ವಾಯುವಿಹಾರಕ್ಕಾಗಿ ತೆರಳಿದ್ದ ಸಂದರ್ಭದಲ್ಲಿ ಶರದ್ ಪವಾರ್ ಅವರಿಗೆ ತೀವ್ರ ಗಾಯ ಉಂಟಾಗಿದ್ದು ಏರ್ ಅಂಬುಲೆನ್ಸ್ ಮೂಲಕ ಮುಂಬೈಗೆ ಕರೆದುಕೊಂಡು ಹೋಗಲಾಗಿದೆ.
73 ವರ್ಷದ ಪವಾರ್ ತಮ್ಮ ಮನೆಯ ಗಾರ್ಡ್ನಲ್ಲಿ ವಾಕ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದ ಪರಿಣಾಮ ಅವರ ಕಾಲಿಗೆ ಗಾಯವಾಗಿದೆ ಮತ್ತು ಬೆನ್ನಿನಲ್ಲಿ ನೋವು ಕಾಣಿಸಿಕೊಂಡಿದ್ದು, ಅವರನ್ನು ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ಸದ್ಯ ಪವಾರ್ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಪವಾರ್ ಅವರು 1999ರಲ್ಲಿ ಕಾಂಗ್ರೆಸ್ ತೊರೆದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್ಸಿಪಿ)ವನ್ನು ಸ್ಥಾಪಿಸಿದ್ದರು. ಯುಪಿಎ ಸರ್ಕಾರದಲ್ಲಿ ಕೃಷಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.