ಲಖ್ನೌ : 'ರಾಹುಲ್ ಗಾಂಧಿ'ಯ ನಾಯಕತ್ವದಿಂದ ರೋಸಿಹೋಗಿರುವ ಕಾಂಗ್ರೆಸ್ ಕಾರ್ಯಕರ್ತರು ಪ್ರಿಯಾಂಕ ಗಾಂಧಿಗೆ ಪಕ್ಷದ ಜವಾಬ್ದಾರಿಯನ್ನು ವಹಿಸುವಂತೆ ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ.
ರಾಹುಲ್ ಗಾಂಧಿ ಉತ್ತರ ಪ್ರದೇಶದಕ್ಕೆ ಭೇಟಿ ನೀಡಿದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಪ್ರತ್ಯುತ್ತರ ನೀಡಲು ಪ್ರಿಯಾಂಕ ಗಾಂಧಿಯಿಂದ ಮಾತ್ರ ಸಾಧ್ಯ ಎಂದು ತಿಳಿಸಿದ್ದಾರೆ.
ಚುನಾವಣೆಗಳಲ್ಲಿ ತಂತ್ರಗಾರಿಕೆ ರಚಿಸುವಲ್ಲಿ ಖ್ಯಾತಿಗಳಿಸಿರುವ ಅಮಿತ್ ಶಾ ಅವರಿಗೆ ಪ್ರತಿತಂತ್ರ ರೂಪಿಸಲು ಪ್ರಿಯಾಂಕ ಗಾಂಧಿಯಿಂದ ಮಾತ್ರ ಸಾಧ್ಯ, ಈ ಹಿನ್ನೆಲೆಯಲ್ಲಿ ಪ್ರಿಯಾಂಕ ಗಾಂಧಿ ಅವರಿಗೇ ಪಕ್ಷದ ನಾಯಕತ್ವ ವಹಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದು ರಾಹುಲ್ ಗಾಂಧಿ ಅವರ ಬಳಿಯೇ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ಕಳೆದ ತಿಂಗಳು ಹೊರಬಿದ್ದ ಮಹಾರಾಷ್ಟ್ರ-ಹರ್ಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿತ್ತು. ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಹಠಾವೋ ಕಾಂಗ್ರೆಸ್ ಬಚಾವೋ ಎಂಬ ಘೋಷ ವಾಕ್ಯ ಕೂಗುತ್ತಿದ್ದರು. ಅಲ್ಲದೇ ಅಂದಿನಿಂದಲೇ ಪ್ರಿಯಾಂಕಾ ಗಾಂಧಿಗೆ ಪಕ್ಷದ ಜವಾಬ್ದಾರಿ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಕಾಂಗ್ರೆಸ್ ನ ಹಲವು ನಾಯಕರೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು.