Untitled Document
Sign Up | Login    
Dynamic website and Portals
  
December 3, 2014

ಮಹಿಳೆಯರ ಅಪಹರಣ ಪ್ರಕರಣ: ಉತ್ತರ ಪ್ರದೇಶಕ್ಕೆ ಮೊದಲ ಸ್ಥಾನ

ನವದೆಹಲಿ : ಭಾರತದಲ್ಲಿ ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಅಪಹರಣ ಪ್ರಕರಣಗಳು ಹೆಚ್ಚುತ್ತಿವೆ ಎಂಬ ಅಂಶ ಬಯಲಾಗಿದೆ. ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಎಂಬುದು ಗಮನಾರ್ಹ ಅಂಶ.

ಸಂಸತ್ ಅಧಿವೇಶನದ ಲೋಕಸಭೆ ಕಲಾಪದಲ್ಲಿ ಮಾತನಾಡಿದ ಗೃಹ ಖಾತೆ ರಾಜ್ಯ ಸಚಿವರಾದ ಹರಿಭಾಯ್ ಪರಥಿಭಾಯ್ ಚೌದರಿ, ಉತ್ತರ ಪ್ರದೇಶ ರಾಜ್ಯದಲ್ಲಿ ಮಹಿಳೆಯರ ಪ್ರಕರಣ ಹೆಚ್ಚು ವರದಿಯಾಗುತ್ತಿದೆ ಎಂದು ತಿಳಿಸಿದ್ದಾರೆ.

2011ರಲ್ಲಿ ದೆಹಲಿಯಲ್ಲಿ ಮಹಿಳೆಯರು ಅಪಹರಣವಾಗಿರುವ 2,085 ಪ್ರಕರಣಗಳು ದಾಖಲಾಗಿವೆ. 2012 ರಲ್ಲಿ 2,160 2013ರಲ್ಲಿ 3,609 ಪ್ರಕರಣಗಳು ದಾಖಲಾಗಿವೆ ಎಂದು ಲೋಕಸಭೆಗೆ ಗೃಹ ಖಾತೆ ರಾಜ್ಯ ಸಚಿವರು ತಿಳಿಸಿದ್ದಾರೆ.

ಇದು ರಾಷ್ಟ್ರ ರಾಜಧಾನಿಯ ಕಥೆಯಾದರೆ ಉತ್ತರ ಪ್ರದೇಶದ ಸ್ಥಿತಿ ಇನ್ನೂ ಗಂಭೀರವಾಗಿದೆ. 2013ರಲ್ಲಿ ಉತ್ತರ ಪ್ರದೇಶದಲ್ಲಿ ಬರೊಬ್ಬರಿ 9,737 ಪ್ರಕರಣ ದಾಖಲಾಗಿದ್ದು ಈ ಪೈಕಿ ಕೇವಲ 2,215 ಜನರಿಗೆ ಶಿಕ್ಷೆಯಾಗಿದೆ.

ಉತ್ತರ ಪ್ರದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂಬ ಆರೋಪ ಕೇಳಿಬರುತ್ತಿದ್ದು ಲೋಕಸಭೆಯಲ್ಲಿ ಪ್ರಕಟಿಸಲಾಗಿರುವ ಅಂಕಿ ಅಂಶಗಳು ಇದಕ್ಕೆ ಪೂರಕವಾಗಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited