Untitled Document
Sign Up | Login    
Dynamic website and Portals
  
December 4, 2014

ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಡಿಸೆಂಬರ್ 5ರಂದು ನಡೆಯಲಿದೆ.

ಬಿಜೆಪಿ ಹಾಗೂ ಶಿವಸೇನೆ ನಡುವೆ ಇದ್ದ ಬಿಕ್ಕಟ್ಟು ಬಗೆಹರಿದ ಬೆನ್ನಲ್ಲೇ ಫಡ್ನವೀಸ್ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಸಮಾರಂಭವು ಮಹಾರಾಷ್ಟ್ರದ ರಾಜಭವನದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.

ಪ್ರಸ್ತುತ ಸಂಪುಟದಲ್ಲಿ 8 ಕ್ಯಾಬಿನೆಟ್ ಸ್ಥಾನಗಳು ಖಾಲಿಯಿದೆ. ಶಿವಸೇನೆಯಿಂದ 7 ರಿಂದ 12 ಸದಸ್ಯರು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಂಭವವಿದೆ. ಸಚಿವ ಸಂಪುಟ ವಿಸ್ತರಣೆಯಿಂದ ಪಕ್ಷದ ವತಿಯಿಂದ ಮತ್ತಷ್ಟು ಉತ್ತಮ ಕಾರ್ಯಗಳು ಹೊರಹೊಮ್ಮುವ ವಿಶ್ವಾಸವಿದೆ ಎಂದು ಬಿಜೆಪಿ ಹಿರಿಯ ಮುಖಂಡರು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited