Untitled Document
Sign Up | Login    
Dynamic website and Portals
  
December 5, 2014

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಏಳು ಸಾವು

ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದಲ್ಲಿ ಸೇನಾ ಕ್ಯಾಂಪ್ ಗೆ ಉಗ್ರರು ನುಗ್ಗಿದ ಪರಿಣಾಮ ಯೋಧರು, ಉಗ್ರರು ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಯೋಧರು, ನಾಲ್ವರು ಉಗ್ರರು ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ.

ಉರಿ ವಲಯದಲ್ಲಿರುವ ಭಾರತೀಯ ಸೇನಾ ಕ್ಯಾಂಪ್‌ ನಲ್ಲಿ ಈ ಘಟನೆ ನಡೆದಿದೆ. ಭಾರಿ ಶಸ್ತ್ರಸ್ತ್ರಗಳನ್ನು ಹೊಂದಿದ್ದ ಉಗ್ರರು ಶುಕ್ರವಾರ ಬರಮುಲ್ಲಾ ಜಿಲ್ಲೆಯ ಉರಿ ಎಂಬಲ್ಲಿ ಭಾರತೀಯ ಸೇನಾ ಕ್ಯಾಂಪ್‌ಗೆ ನುಗ್ಗಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಯೋಧರು, ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ.

ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಉರಿ ವಲಯದಲ್ಲಿರುವ ಸೇನಾ ಕ್ಯಾಂಪ್‌ ಬೆಳಿಗ್ಗೆ 3:10ಕ್ಕೆ ನುಗ್ಗಿದ ಉಗ್ರರು ಯೋಧರ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಸಹ ಗುಂಡಿನ ದಾಳಿ ನಡೆಸಿದ್ದಾರೆ.

ಸದ್ಯ ಸೇನಾ ಕ್ಯಾಂಪ್‌ನಲ್ಲಿ ಗುಂಡಿನ ಚಕಮಕಿ ನಿಂತಿದ್ದು, ಉಗ್ರರಿಗಾಗಿ ಯೋಧರು ತೀವ್ರ ಶೋಧ ನಡೆಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯನ್ನು ವಿಫಲಗೊಳಿಸಲು ಉಗ್ರರು ಹರಸಾಹಸ ಪಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಯೋಧರ ಸೇನಾ ಕ್ಯಾಂಪ್ ಗಳ ಮೇಲೆ ಉಗ್ರರು ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಡಿ.9ರಂದು ಜಮ್ಮು-ಕಾಶ್ಮೀರದಲ್ಲಿ 3ನೇ ಹಂತದ ಮತದಾ ನಡೆಯಲಿದೆ. 3ನೇ ಹಂತದ ಮತದಾನದಲ್ಲಿ ಬಾರಾಮುಲ್ಲಾ ಜಿಲ್ಲೆಯಲ್ಲೂ ಮತದಾನ ನಡೆಯಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited